ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ !

0 821

ಮತದಾನದ ವೇಳೆ ಬಿಜೆಪಿ ಕಾರ್ಯಕರ್ತರ ನಡುವೆಯೇ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ.

ಚಿಕ್ಕಮಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ರಾಜ್ಯದಲ್ಲಿ ನಡೆದ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು ಚಿಕ್ಕಮಗಳೂರು ತಾಲೂಕಿನ ಉಜ್ಜಿನಿ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತರ ನಡುವೆಯೇ ಮಾರಾಮಾರಿಯಾಗಿದೆ.

ಬಿಜೆಪಿ ಮುಖಂಡ ಪ್ರವೀಣ್ ಖಾಂಡ್ಯ ಎಂಬುವವರ ಮೇಲೆ ಹಲ್ಲೆಯಾದ ಬಗ್ಗೆ ವರದಿಯಾಗಿದೆ.

ಮತದಾನದ ವೇಳೆ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿದ್ದು, ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಪ್ರವೀಣ್ ಖಾಂಡ್ಯ ಮೇಲೆ ಹಿಗ್ಗಾಮುಗ್ಗ ಥಳಿತವಾಗಿದೆ. ಪ್ರವೀಣ್‌ ತಲೆಗೆ ಏಟಾಗಿದ್ದು, ರಕ್ತ ಸುರಿದಿದೆ. ಕೂಡಲೇ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಯಾಕಾಯ್ತು ಗಲಾಟೆ?
ಕಳೆದ ವಿಧಾನಸಭಾ ಚುನಾವಣೆ ವೇಳೆ ಪ್ರವೀಣ್ ಖಾಂಡ್ಯ ಕಾಂಗ್ರೆಸ್‌ನಿಂದ ಬಿಜೆಪಿ ಸೇರ್ಪಡೆಯಾಗಿದ್ದರು. ಆದರೆ, ಲೋಕಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ಮತದಾರರಿಗೆ ಪ್ರೇರೇಪಿಸಿದ್ದಾರೆ ಎಂಬ ವಿಷಯವು ಗಲಾಟೆಗೆ ಕಾರಣವಾಗಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಆಕ್ರೋಶಗೊಂಡು ಪ್ರವೀಣ್‌ ಬಳಿ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಹೊಡೆದಾಟ ಆಗಿದೆ.

ಬಾಳೆಹೊನ್ನೂರು ವ್ಯಾಪ್ತಿಯ ಬೂತ್ ಮಟ್ಟದಲ್ಲಿ ಖಾಂಡ್ಯ ಪ್ರವೀಣ್ ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿ ಕಾರ್ಯಕರ್ತರಾದ ಸೃಜನ್, ಸಚಿನ್, ಅಭಿ, ಶಂಕರ್‌ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

Leave A Reply

Your email address will not be published.

error: Content is protected !!