ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ !

0 49

ರಿಪ್ಪನ್‌ಪೇಟೆ: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿಗೆ ಸಮೀಪದ ಬಾಳೂರು ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.

ಮೃತನನ್ನು ಷಣ್ಮುಖ (51) ಎಂದು ಗುರುತಿಸಲಾಗಿದ್ದು, ಇವರು ಶಿವಮೊಗ್ಗ ಮೂಲದವರು ಎನ್ನಲಾಗುತ್ತಿದ್ದು, ಕೂಲಿ ಕೆಲಸವನ್ನು ಅರಸಿಕೊಂಡು ಗ್ರಾಮಕ್ಕೆ ಬಂದು ರವಿಗೌಡ ಎಂಬುವವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಭಾನುವಾರ ಸಂಜೆ ಸ್ಥಳೀಯರೋರ್ವರು ಕರೆದಾಗ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಬಾಗಿಲು ತೆರೆದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ರಿಪ್ಪನ್‌ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!