ಶಿವಮೊಗ್ಗ ಜಿಲ್ಲೆಯಲ್ಲಿ ಮೂರ್ನಾಲ್ಕು ಸ್ಥಾನ ಕಾಂಗ್ರೆಸ್ ಗೆಲ್ಲಲಿದೆ ; ಕಲಗೋಡು ರತ್ನಾಕರ್

0 36

ರಿಪ್ಪನ್‌ಪೇಟೆ: ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಸೊರಬ ಸೇರಿದಂತೆ ಭದ್ರಾವತಿಯಲ್ಲಿ ಕಾಂಗ್ರೆಸ್ ಪಕ್ಷ ಈ ಭಾರಿ ಗೆಲುವು ಸಾಧಿಸಲಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಆಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಅಭಿಮತ ವ್ಯಕ್ತಪಡಿಸಿದರು.

ರಿಪ್ಪನ್‌ಪೇಟೆಯ ಕಾಂಗ್ರೆಸ್ ಕಛೇರಿಯಲ್ಲಿ ಕೆರೆಹಳ್ಳಿ ಕಸಬಾ ಹೋಬಳಿ ವ್ಯಾಪ್ತಿಯ ಕಾಂಗ್ರೆಸ್ ಬೂತ್ ಸಮಿತಿಯ ಕಾರ್ಯಕರ್ತರ ಸಮಲೋಚನಾ ಸಭೆಯ ನಂತರ
ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ 650 ಭರವಸೆ ನೀಡಿ 150 ಈಡೇರಿಸುವಲ್ಲಿ ಸಂಪೂರ್ಣ ವಿಫಲಗೊಂಡಿದೆ. ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರ ಐದು ವರ್ಷದ ಅವಧಿಯಲ್ಲಿ ಬೆಲೆ ಏರಿಕೆಯೊಂದಿಗೆ ಭ್ರಷ್ಟಾಚಾರದಲ್ಲಿಯೇ ಕಾಲಕಳೆದಿದ್ದು ಸಾಮಾನ್ಯ ಜನರ ಸಮಸ್ಯೆ ಪರಿಹಾರ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವುದು ಮತದಾರಿಗೆ ತಿಳಿದಿರುವ ವಿಷಯವಾಗಿದೆ ಎಂದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ಮುಖ್ಯವಾಗಿದ್ದು ನಮ್ಮ ಕಾರ್ಯಕರ್ತರು ಇಂದಿನಿಂದಲೇ ಕಾರ್ಯಪ್ರವೃತ್ತರಾಗಿದ್ದಾರೆ. ಈ ಭಾರಿ ಸಾಗರ ಕ್ಷೇತ್ರದಲ್ಲಿ ಗೋಪಾಲಕೃಷ್ಣ ಬೇಳೂರು ಮತ್ತು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಿಮ್ಮನೆ ರತ್ನಾಕರ್ ಹೆಚ್ಚಿನ ಬಹುಮತದೊಂದಿಗೆ ಗೆಲ್ಲಿಸಲು ಜನರು ಸಜ್ಜಾಗಿದ್ದಾರೆಂದು ಹೇಳಿ, ಈ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪನವರ ಕಾರ್ಯವೈಖರಿಯಿಂದ ಮತದಾರರು ಭ್ರಮನಿರಸನರಾಗಿದ್ದಾರೆ. ಈಗಾಗಲೇ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಕಡೆ ಹೆಚ್ಚು ಮತದಾರರು ಆಸಕ್ತರಾಗಿ ಬೆಂಬಲಿಸುತ್ತಿರುವುದು ನೋಡಿದರೆ ಈ ಬಾರಿ ನಮ್ಮ ಪಕ್ಷದ ಗೆಲುವು ಸ್ಪಷ್ಟವಾಗುತ್ತಿದೆ ಎಂದು ಹೇಳಿ, ರಾಜ್ಯದಲ್ಲಿ ಮುಂದಿನ ಸರ್ಕಾರ ಕಾಂಗ್ರೆಸ್ ಪಕ್ಷದ ಸರ್ಕಾರ ಅಧಿಕಾರ ಹಿಡಿಯುವುದು ನಿಶ್ಚಿತವಾಗಿದೆ ಎಂದರು.

ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹರತಾಳು ಜಯಶೀಲಪ್ಪಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ, ತಾ.ಪಂ.ಮಾಜಿ ಸದಸ್ಯ ಎರಗಿ ಉಮೇಶ್, ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷ ಆಸೀಫ್ ಅಹ್ಮದ್, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ, ಡಿ.ಈ.ಮಧುಸೂದನ್, ಅರಸಾಳು ಗ್ರಾ.ಪಂ. ಅಧ್ಯಕ್ಷ ಉಮಾಕರ್, ಕೆಂಚನಾಲ ಗ್ರಾ.ಪಂ.ಅಧ್ಯಕ್ಷ ಉಭೇದುಲ್ಲಾಷರೀಫ್, ಕೆರೆಹಳ್ಳಿ ರವೀಂದ್ರ, ಉಮೇಶ್ ಹೆಚ್.ಎನ್.ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು.

Leave A Reply

Your email address will not be published.

error: Content is protected !!