ಜಗನ್ಮಾತೆ ಹೊಂಬುಜ ಪದ್ಮಾವತಿ ದೇವಿ ದರ್ಶನಾಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ

0 47

ರಿಪ್ಪನ್‌ಪೇಟೆ: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಇಂದು ಹೊಂಬುಜ ಜೈನಮಠದ ಜಗನ್ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶಿರ್ವಾದ ಪಡೆದರು. ನಂತರ ಮಠದ ಜಗದ್ಗುರು ಡಾ.ಶ್ರೀಮದ್‌ ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

https://fb.watch/iUrlgmTieA/

ಶ್ರೀಗಳು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಸನ್ಮಾನಿಸಿ ಆಶೀರ್ವದಿಸಿದರು.


ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಎಂ.ಎಲ್.ಸಿ. ಭೋಜೇಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್.ವರ್ತೇಶ್, ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯೆಂದು ಬಿಂಬಿಸಲಾದ ಯಡೂರು ರಾಜಾರಾಮ್, ಇನ್ನಿತರರು ಹಾಜರಿದ್ದರು.

Leave A Reply

Your email address will not be published.

error: Content is protected !!