ಗೃಹಲಕ್ಷ್ಮಿ ಯೋಜನೆಗೆ ಸಿಗ್ತು ಚಾಲನೆ ; ಮಹಿಳೆಯರ ಹರ್ಷ

0 50

ರಿಪ್ಪನ್‌ಪೇಟೆ : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಎಲ್ಲೆಡೆ ಚಾಲನೆ ಸಿಕ್ಕಿದ್ದು ಮಹಿಳೆಯರು ಹರ್ಷ ವ್ಯಕ್ತಪಡಿಸಿದ್ದಾರೆ.


ಕೋಡೂರು ಗ್ರಾಮ ಪಂಚಾಯತ್ ವತಿಯಿಂದ ಗ್ರಾ.ಪಂ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದಿದ್ದು ಮೈಸೂರಲ್ಲಿ ನಡೆದ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿತ್ತು‌. ಗ್ರಾಪಂ ವ್ಯಾಪ್ತಿಯ ಪ್ರತಿ ಗ್ರಾಮದ ನೂರಾರು ಮಹಿಳೆಯರು ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಮತ್ತು ತಾ.ಪಂ ಮಾಜಿ ಸದಸ್ಯ ಚಂದ್ರಮೌಳಿ ಗೌಡ ಪಾಲ್ಗೊಂಡು ಮಾತನಾಡಿ, ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹ ಜ್ಯೋತಿ ಹಾಗೂ ಗೃಹಲಕ್ಷ್ಮಿ, ಯುವ ನಿಧಿ ಯೋಜನೆ ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ಯೋಜನೆ ಆಗಿದೆ. ಇಂದು ಗೃಹಲಕ್ಷ್ಮಿ ಯೋಜನೆಯನ್ನು ಸಿದ್ದರಾಮಯ್ಯನವರು ಮೈಸೂರಿನಲ್ಲಿ ಇದಕ್ಕೆ ಚಾಲನೆ ಕೊಡುತ್ತಿದ್ದಾರೆ.

1,9,55,000 ಲಕ್ಷ ಜನರು ಈಗಾಗಲೇ ಆಯ್ಕೆಯಾಗಿರುವುದರಿಂದ ಒಂದೇ ಸಲ ಚಾಲನೆ ಕೊಡುವುದರಿಂದ ಎಲ್ಲಾ ಅಕೌಂಟ್ಗೆ 2000 ರೂ. ಹಣ ಪ್ರತಿ ತಿಂಗಳು ಕೊಡಲಾಗುತ್ತದೆ. ನಿಮ್ಮ ಖಾತೆಗೆ ಹಣ ಬಂದ ತಕ್ಷಣ ನಿಮ್ಮ ಮೊಬೈಲ್ ಗೆ ಮೆಸೇಜ್ ಬರುತ್ತದೆ. ಮೊದಲನೆಯದಾಗಿ ರಾಜ್ಯ ಸರ್ಕಾರ ತೆಗೆದುಕೊಂಡಿರುವಂತಹ ಈ ಗೃಹಲಕ್ಷ್ಮಿ ಯೋಜನೆಗೆ ಅಭಿನಂದನೆ ಸಲ್ಲಿಸುವಂತಹ ಕಾರ್ಯಕ್ರಮ ಎಲ್ಲೆಡೆ ನಡೆಯುತ್ತಿದೆ. ನಮ್ಮ ರಾಜ್ಯ ಸರ್ಕಾರದ ಈ ಯೋಜನೆ ಬೇರೆ ರಾಜ್ಯಗಳು ಅನುಸರಿಸುತ್ತಿವೆ ಎಂದರು.

ಕೋಡೂರು ವ್ಯಾಪ್ತಿಯಲ್ಲಿ 1300 ಗೃಹಲಕ್ಷ್ಮಿಯರಿಗೆ ಈ ಲಾಭ ಸಿಗುತ್ತಿದೆ. ಇದು ಇಡೀ ದೇಶವೆ ಹೆಮ್ಮೆಪಡುವ ಕಾರ್ಯಕ್ರಮವಾಗಿದೆ‌. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಪಿಡಿಒ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಗಳು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ ವ್ಯಾಪ್ತಿಯ ಗೃಹಲಕ್ಷ್ಮಿ ಫಲಾನುಭವಿಗಳು, ಗ್ರಾ.ಪಂ ಸಿಬ್ಬಂದಿ ವರ್ಗದವರು ಇದ್ದರು.

ಹುಂಚ ವರದಿ :

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗ್ರಾಮ ಪಂಚಾಯ್ತಿ ಹುಂಚ ಇವರ ಸಹಯೋಗದಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮನ್ನು ಹುಂಚ ಗ್ರಾಮ ಪಂಚಾಯಿ ಕಾರ್ಯಾಲಯದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಂಗಲ ದೇವರಾಜ್‌ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಉಪಾಧ್ಯಕ್ಷ ವೆಂಕಟೇಶ್ ಮತ್ತು ಸದಸ್ಯರುಗಳಾದ ದೇವೇಂದ್ರಪ್ಪ, ರಾಘವೇಂದ್ರ ತೋಟದಕಟ್ಟು, ರಾಜಶೇಖರ, ಶ್ರೀಧರ ಸಣಕಲು, ಮಂಜುನಾಥ ಆರ್ ಯಶಸ್ವತಿ ವೃಷಭರಾಜ್ ಜೈನ್,ಆಶಾ ಯದುಕುಮಾರ್, ಕು|| ಶ್ವೇತಾ, ಶಿವಾನಂದ, ಸರೋಜ ನವೀನ್, ಪಲ್ಲವಿ, ಚೇತನ್, ಚಂದ್ರಕಲಾ ಮಂಜುನಾಥ್, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರಮೇಶ್‌ ಹಾಗೂ ಗ್ರಾಮ ಪಂಚಾಯ್ತಿ ನೋಡಲ್ ಅಧಿಕಾರಿ ಮಾರುತಿ, ಸಹಾಯಕ ಕೃಷಿ ಅಧಿಕಾರಿಗಳು ಇವರ ಉಪಸ್ಥಿತಿಯಲ್ಲಿ, ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಹಿಳೆಯರು, ಗ್ರಾಮಸ್ಥರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಗೃಹಲಕ್ಷ್ಮಿ, ಯೋಜನೆಯಡಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಯಿತು.

Leave A Reply

Your email address will not be published.

error: Content is protected !!