ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಜೊತೆಗೆ ₹ 1.5 ಲಕ್ಷ ದಂಡ !

0 46

ಶಿವಮೊಗ್ಗ : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಜೊತೆಗೆ ₹ 1.5 ಲಕ್ಷ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.

2022ನೇ ಸಾಲಿನಲ್ಲಿ ಶಿವಮೊಗ್ಗ ಟೌನ್ ನ 27
ವರ್ಷದ ವ್ಯಕ್ತಿಯೊಬ್ಬನು, 14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುತ್ತಾನೆಂದು ನೊಂದ ಬಾಲಕಿಯ ತಂದೆಯು ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಪ್ರಕರಣದಲ್ಲಿ ತನಿಖಾಧಿಕಾರಿಗಳಾದ ಬಾಲರಾಜ್ ಬಿ,
ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ-ಎ ಉಪ ವಿಭಾಗ ರವರು‌ ತನಿಖೆ ಕೈಗೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.


ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, The Addl District and Sessions Court, FTSCII (POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪಿ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧೀಶರು‌ ದಿನಾಂಕ: 04-08-2023 ರಂದು ಆರೋಪಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 1.5 ಲಕ್ಷ ರೂ. ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 09 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.

Leave A Reply

Your email address will not be published.

error: Content is protected !!