ಮದುವೆ ಮಂಟಪದಲ್ಲಿ ಮತದಾನ ಜಾಗೃತಿ

0 50

ಚಿಕ್ಕಮಗಳೂರು : ಜಿಲ್ಲಾ ಪಂಚಾಯಿತಿಯ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ‌. ಗೋಪಾಲ್ ಕೃಷ್ಣ ಬಿ ರವರು ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿರುವ ಕನಕ ಭವನ ಕಲ್ಯಾಣ ಮಂಟಪಕ್ಕೆ ಭೇಟಿ ನೀಡಿ, ವಧು ವರರಾದ ಕಾವ್ಯ ಮತ್ತು ರಾಜೇಶ್ ರವರಿಗೆ ಮದುವೆಯ ಶುಭಾಶಯ ಕೋರಿ. ನಂತರ ಏಪ್ರಿಲ್ 26 ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಹಾಗೂ ಮತದಾನದ ಮಹತ್ವದ ಕುರಿತು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಲ್ಯಾಣ ಮಂಟಪದಲ್ಲಿ ಮದುವೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೂ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಂಜುನಾಥ ಹಾಗೂ ವಿವಿಧ ಇಲಾಖೆಯ  ಅಧಿಕಾರಿಗಳು ಹಾಜರಿದ್ದರು.

Leave A Reply

Your email address will not be published.

error: Content is protected !!