9ನೇ ತರಗತಿ ವಿದ್ಯಾರ್ಥಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಕಾಡಿನಲ್ಲಿ ಪತ್ತೆ !

0 1,135

ತೀರ್ಥಹಳ್ಳಿ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ತಾಲೂಕಿನ ಬಸವಾನಿ ಸಮೀಪದ ಕಾಡೊಂದರಲ್ಲಿ ಸೋಮವಾರ ಪತ್ತೆಯಾಗಿದೆ.

ಬಸವಾನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶುಂಠಿಕಟ್ಟೆ ಪ್ರೌಢ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಪ್ರೀತಿ ಎಂಬಾಕೆ ಶಾಲೆಗೆ ಕಳೆದ 15 ದಿನಗಳಿಂದ ಹೋಗಿರಲಿಲ್ಲ. ಶಾಲೆಗೆ ಬರುವಂತೆ ತಿಳಿಸಲಾಗಿತ್ತು. ಮನೆಯಲ್ಲಿ ಕಾರಣ ಕೇಳಿದ್ದಕ್ಕೆ ಸೋಮವಾರ ಬಸವಾನಿ ಬಳಿಯ ಪ್ಲಾಂಟೇಷನ್ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave A Reply

Your email address will not be published.

error: Content is protected !!