ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸರ ದಾಳಿ ; ಸಿಕ್ಕಿದ್ದೇನು ಗೊತ್ತಾ ?

0 44

ತೀರ್ಥಹಳ್ಳಿ : ಇಲ್ಲಿನ ವಿಹಂಗಮ ರೆಸಾರ್ಟ್ ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ 50 ಜನ ಸಿಬ್ಬಂದಿಗಳನ್ನು ಒಳಗೊಂಡ ತಂಡ ಆ. 12 ರಂದು ರಾತ್ರಿ ವಿಹಂಗಮ ರೆಸಾರ್ಟ್ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು ಮೌಲ್ಯ 1 ಲಕ್ಷ ರೂ.ಗಳ ಒಂದು ಡಬಲ್ ಬ್ಯಾರಲ್ ಬಂದೂಕು, ಅಂದಾಜು ಮೌಲ್ಯ 25 ಸಾವಿರ ರೂ‌.ಗಳ 310 ಜೀವಂತ ಗುಂಡುಗಳು, ಒಂದು ಕತ್ತಿ ಮತ್ತು ಒಂದು ಚಾಕು, ಮೂರು ಕಾಡು ಕೋಣದ ಕೊಂಬಿನ ಟ್ರೊಫಿ, ಆರು ಜಿಂಕೆ ಕೊಂಬಿನ ಟ್ರೊಫಿ, ಒಂದು ಸಿಸಿ ಟಿವಿ ಡಿವಿ ಆರ್, ಅಂದಾಜು ಮೌಲ್ಯ 7,650 ರೂ.ಗಳ ಒಟ್ಟು 51 ಬಿಯರ್ ಟಿನ್ ಗಳು, ಅಂದಾಜು ಮೌಲ್ಯ 1 ಲಕ್ಷ ರೂ. ಗಳ ಮದ್ಯ ತುಂಬಿದ ಬಾಟಲ್ ಗಳು, ಅಂದಾಜು ಮೌಲ್ಯ 750 ರೂ.ಗಳ ಒಟ್ಟು 6 Breezer ಬಾಟಲ್ ಮತ್ತು 3 ಲೀಟರ್ ಮದ್ಯವನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಈ ದಾಳಿಯಲ್ಲಿ ಮಿಥುನ್ ಕುಮಾರ್ ಜಿ.ಕೆ ಐಪಿಎಸ್ ಪೋಲಿಸ್ ಅಧೀಕ್ಷಕರು ಮತ್ತು ಅನಿಲ್ ಕುಮಾರ್ ಭೂಮರೆಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಗಜಾನನ ವಾಮನ ಸುತಾರ ಪೊಲೀಸ್ ಉಪಾಧೀಕ್ಷಕರು ತೀರ್ಥಹಳ್ಳಿ ಉಪ ವಿಭಾಗ ಮತ್ತು ಅಶ್ವತ್ ಗೌಡ ಪೊಲೀಸ್ ನಿರೀಕ್ಷಕರು ತೀರ್ಥಹಳ್ಳಿ ಪೊಲೀಸ್ ಠಾಣೆ ರವರ ನೇತೃತ್ವದ ಸಾಗರ್ ಅತ್ತರವಾಲ ಪೊಲೀಸ್ ಉಪನಿರೀಕ್ಷಕರು ತೀರ್ಥಹಳ್ಳಿ ಪೊಲೀಸ್ ಠಾಣೆ, ನವೀನ್ ಕುಮಾರ್ ಮಠಪತಿ ಪೊಲೀಸ್ ಉಪನಿರೀಕ್ಷಕರು ಮಾಳೂರು ಪೊಲೀಸ್ ಠಾಣೆ, ರಂಗನಾಥ ಅಂತರಗಟ್ಟಿ ಪೊಲೀಸ್ ಉಪನಿರೀಕ್ಷಕರು ಆಗುಂಬೆ ಪೊಲೀಸ್ ಠಾಣೆ, ಪ್ರವೀಣ್, ಪೊಲೀಸ್ ಉಪ ನಿರೀಕ್ಷಕರು, ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಇವರು ಪಾಲ್ಗೊಂಡಿದ್ದರು.

Leave A Reply

Your email address will not be published.

error: Content is protected !!