ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ

0 46

ಸೊರಬ : ರಾಜ್ಯ ಕಾಂಗ್ರೆಸ್ ಸರ್ಕಾರವು ಚುನಾವಣೆ ಪೂರ್ವದಲ್ಲಿ ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ಅನುಷ್ಠಾನಗೊಳಿಸಿದೆ ಎಂದು ಚಂದ್ರಗುತ್ತಿ ಗ್ರಾಪಂ ಉಪಾಧ್ಯಕ್ಷ ಎಂ.ಬಿ ರೇಣುಕಾಪ್ರಸಾದ್ ಹೇಳಿದರು,

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಇವರ ಸಂಯುಕ್ತ ಆಶ್ರಯದಲ್ಲಿ ಚಂದ್ರಗುತ್ತಿ ಗ್ರಾಪಂ ಕಾರ್ಯಾಲಯದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆಯ ಅಧಿಕೃತ ಚಾಲನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದಾಗಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ಮಾಸಿಕ 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯಿತಿಯಲ್ಲಿ ಚಾಲನೆ ನೀಡಲಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಾ ಸರ್ಕಾರಿ ನೌಕರರಿಗೆ ಸಂಬಳವನ್ನು ಒದಗಿಸುತ್ತಾ, ಎಲ್ಲಾ ಇಲಾಖೆಗಳಿಗೂ ಅನುದಾನ ನೀಡುವುದರ ಜೊತೆಯಲ್ಲಿ ಮಹಿಳೆಯರ ಆರ್ಥಿಕ ಸಬಲತೆಗಾಗಿ ಮತ್ತು ಕುಟುಂಬದ ನಿರ್ವಹಣೆಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಗೃಹಲಕ್ಷ್ಮಿ ಯೋಜನೆಯ ಅಧಿಕೃತ ಚಾಲನೆ ಉದ್ಘಾಟನೆಯನ್ನು ಗ್ರಾಂ.ಪ. ಅಧ್ಯಕ್ಷೆ ಸರಿತಾ ಕೃಷ್ಣಪ್ಪ ನೆರವೇರಿಸಿದರು.

ಗ್ರಾಪಂ ಸದಸ್ಯ ರತ್ನಾಕರ್ ಎಂ.ಪಿ ಮಾತನಾಡಿ, ಮಹಿಳೆಯರ ಸ್ವಾವಲಂಬನೆ ಬದುಕಿಗೆ ಗೃಹಲಕ್ಷ್ಮಿ ಯೋಜನೆ ಅಡಿ ನೀಡುವ 2,000 ರೂ. ಅತ್ಯಂತ ಸಹಕಾರಿಯಾಗಿದೆ ಎಂದರು.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ನೇರ ಪ್ರಸಾರವನ್ನು ವೀಕ್ಷಿಸುವಂತೆ ಗ್ರಾ.ಪಂ ಕಛೇರಿಯಲ್ಲಿ ಸಾರ್ವಜನಿಕರಿಗೆ ಎಲ್.ಇ.ಡಿ ಟಿ.ವಿ ವ್ಯವಸ್ಥೆ ಕಲ್ಪಿಸಲಾಗಿತ್ತು. 800 ಕ್ಕೂ ಹೆಚ್ಚು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿ ನಾರಾಯಣಮೂರ್ತಿ, ಗ್ರಾಪಂ ಸದಸ್ಯರಾದ ಎಂ.ಪಿ ರತ್ನಾಕರ್, ತಿರುಪತಿ ಬಾಡದಬೈಲು, ಲೋಕೇಶ್, ರಾಜಶೇಖರ್ ಎಸ್. ಕೆ ಲಕ್ಷ್ಮಿ ಚಂದ್ರಪ್ಪ, ಚಂದ್ರಕಾಂತ್, ಶಿಲ್ಪ, ಲಕ್ಷ್ಮಿ ರವಿ, ಪ್ರಭಾರ ಉಪ ತಹಶೀಲ್ದಾರ್ ವಿ.ಎಲ್ ಶಿವಪ್ರಸಾದ್, ಗ್ರಾಪಂ ಕಾರ್ಯದರ್ಶಿ ರೇಖಾ, ಗ್ರಾ.ಪಂ ನೌಕರರ ಮಂಜುನಾಥ್, ಸಂತೋಷ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!