ಅರಸಾಳು ಮತ್ತು ಹೆದ್ದಾರಿಪುರ ಗ್ರಾ.ಪಂ. ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

0 52



ರಿಪ್ಪನ್‌ಪೇಟೆ: ಸಮೀಪದ ಅರಸಾಳು ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ಆಧ್ಯಕ್ಷರಾಗಿ ಜಯಮ್ಮ ಉಂಡಗೋಡು ನಾಗಪ್ಪ ಉಪಾಧ್ಯಕ್ಷರಾಗಿ ದೇವರಾಜ್ ಬಸವಾಪುರ ಆಯ್ಕೆಯಾಗಿದ್ದಾರೆ.


ಅರಸಾಳು ಗ್ರಾಮ ಪಂಚಾಯ್ತಿ ಎರಡನೇ ಅವಧಿಗೆ ಇಂದು ಆಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆದು ಜಯಮ್ಮ ನಾಗಪ್ಪ 7 ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾದರೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ದೇವರಾಜ್ ಬಸವಾಪುರ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುವಣಾಧಿಕಾರಿ ಘೋಷಣೆ ಮಾಡಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಮತ್ತು ಪಿಡಿಓ ಹಾಜರಿದ್ದರು.



ಹೆದ್ದಾರಿಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ


ರಿಪ್ಪನ್‌ಪೇಟೆ: ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ಆಧ್ಯಕ್ಷರಾಗಿ ವಿನಂತಿ ರಾಘವೇಂದ್ರ, ಉಪಾಧ್ಯಕ್ಷರಾಗಿ ವನಿತಾ ಗಂಗಾಧರ್ ಆಯ್ಕೆಯಾಗಿದ್ದಾರೆ.


ಹೆದ್ದಾರಿಪುರ ಗ್ರಾಮ ಪಂಚಾಯ್ತಿ ಎರಡನೇ ಅವಧಿಗೆ ಇಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆದು ಅಧ್ಯಕ್ಷರಾಗಿ ವಿನಂತಿ ರಾಘವೇಂದ್ರ 8 ಮತಗಳನ್ನು ಪಡೆಯುವ ಮೂಲಕ ಮೂಲಕ ಆಯ್ಕೆಯಾದರೆ ಮತ್ತು ಉಪಾಧ್ಯಕ್ಷರಾಗಿ ವನಿತಾ ಗಂಗಾಧರ್ 9 ಮತಗಳನ್ನು ಪಡೆಯುವ ಮೂಲಕ ವಿಜಯಸಾಧಿಸಿದ್ದಾರೆಂದು ಚುವಣಾಧಿಕಾರಿ ಘೋಷಣೆ ಮಾಡಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಮತ್ತು ಪಿಡಿಓ ಹಾಜರಿದ್ದರು.

Leave A Reply

Your email address will not be published.

error: Content is protected !!