Shivamogga | ಬೆಳಗಾವಿಯಲ್ಲಿ ನಡೆದ ಮಹಿಳೆಯರ ಮೇಲಿನ ಹಲ್ಲೆ ಖಂಡಿಸಿ ಬಿಜೆಪಿ ಪ್ರತಿಭಟನೆ

0 235

ಶಿವಮೊಗ್ಗ : ಬೆಳಗಾವಿಯ ಗ್ರಾಮಾಂತರದಲ್ಲಿ (Belagavi Rural) ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯವನ್ನು ಖಂಡಿಸಿ, ಶಿವಮೊಗ್ಗ (Shivamogga) ಬಿಜೆಪಿ (BJP) ಮಹಿಳಾ ಮೋರ್ಚಾದಿಂದ ಇಂದು ನಗರದ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಬೆಳಗಾವಿಯಲ್ಲಿ ಕ್ಲುಲಕ ಕಾರಣಕ್ಕೆ, ಪ್ರೇಮಿಗಳಿಬ್ಬರು ಪ್ರೀತಿಸಿ ಮನೆಬಿಟ್ಟು ಹೋಗಿದ್ದಕ್ಕೆ ಹುಡುಗನ ತಾಯಿಯನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ, ಹಲ್ಲೆ ಮಾಡಿರುವುದು. ಇಡೀ ನಾಗರೀಕ ಸಮಾಜ ತಲೆತಗ್ಗಿಸುವ ಘಟನೆಯಾಗಿದೆ.


ನಾವು ಯಾವ ಸಮಾಜದಲ್ಲಿ ಇದ್ದೇವೆ ಎನ್ನುವುದು ಪ್ರಶ್ನೇ ಕಾಡುತ್ತಿದೆ. ಸರ್ಕಾರ ಕೂಡಲೇ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಬೇಕಿತ್ತು. ಮುಖ್ಯಮಂತ್ರಿಗಳು ಕೂಡಲೇ ಈ ಘಟನೆಗೆ ಸಂಬಂಧಿಸಿದಂತೆ ವಿಶೇಷ ಸಭೆ ಕರೆದು ತಪ್ಪಿತಸ್ಥರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕಿತ್ತು. ಇಡೀ ರಾಜ್ಯದ ಜನ ತಲೆತಗ್ಗಿಸುವ ಘಟನೆ ಇದ್ದಾಗಿದ್ದು, ಕೇಂದ್ರದಿಂದ ಘಟನೆಯ ಸತ್ಯ ಪರಿಶೀಲನೆಗೆ ಸತ್ಯಶೋಧನ ತಂಡ ಬಂದಿದೆ. ಮುಖ್ಯಮಂತ್ರಿಗಳಿಗೂ ಅಕ್ಕ ತಂಗಿಯರಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಏನು ಬೇಕಾದರೂ ಮಾಡಬಹುದು ಎಂಬ ಸ್ಥಿತಿಯಲ್ಲಿ ಕೀಡಿಗೇಡಿಗಳಿದ್ದಾರೆ. ಸರ್ಕಾರ ಘಟನೆಯ ಬಗ್ಗೆ ಖಂಡನೆ ವ್ಯಕ್ತಪಡಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.


ಶಾಸಕ ಚನ್ನಬಸಪ್ಪ ಮಾತನಾಡಿ, ಅಧಿವೇಶನ ಸಂದರ್ಭದಲ್ಲಿ ಬೆಳಗಾವಿಯ ಈ ಅಮಾನುಷ ಘಟನೆಯ ಬಗ್ಗೆ ಸಭಾಧ್ಯಕ್ಷರು ಚರ್ಚೆಗೆ ಅವಕಾಶ ನೀಡಲಿಲ್ಲ. ಅಲ್ಲೇ ಅಧಿವೇಶನ ನಡೆಯುತ್ತಿರುವಾಗಲೇ ಈ ಘಟನೆ ನಡೆದಿದ್ದು, ಸಭಾಧ್ಯಕ್ಷರು ಚರ್ಚೆಗೆ ಅವಕಾಶ ನೀಡಬೇಕಿತ್ತು. ಅದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ರವರ ಕ್ಷೇತ್ರವಾಗಿದ್ದು, ಅವರಾದರೂ ಸದನದಲ್ಲಿ ಈ ವಿಚಾರವನ್ನೆತ್ತಿ ಖಂಡನೆ ವ್ಯಕ್ತಪಡಿಸಬೇಕಿತ್ತು. ಈ ಸರ್ಕಾರ ಮಹಿಳೆಯನ್ನು ಗೌರವಿಸುವುದಿಲ್ಲ ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.


ಕಾಂಗ್ರೆಸ್ ಇಂತಹ ದುಷ್ಟ ಶಕ್ತಿಗಳಿಗೆ ಶಕ್ತಿಕೊಡುತ್ತ ಬಂದಿದೆ. ಮಹಿಳೆಯರ ಮೇಲೆ ಅಪಮಾನ ಯಾವುದೇ ಕಾರಣಕ್ಕೂ ಬಿಜೆಪಿ ಸಹಿಸುವುದಿಲ್ಲ. ಸಚಿವರು ಕೂಡ ಚಕಾರ ಎತ್ತಲಿಲ್ಲ. ಲಜ್ಜೆಗೆಟ್ಟ ಭಂಡ ಸರ್ಕಾರವಿದು. ಮಹಿಳೆಯರ ಮತ್ತು ಸಂಸ್ಕೃತಿಯ ರಕ್ಷಣೆ ಮಾಡದ ಇಂತಹ ಸರ್ಕಾರ ಇರಬಾರದು ಎಂದರು.


ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅಂತರಾಷ್ಡಿçÃಯ ಷಡ್ಯಂತ್ರಕ್ಕೆ ಬಲಿಯಾದ ಕೆಲವರಿಂದ ಮಣಿಪುರದಲ್ಲಿ ಇಂತಹ ಘಟನೆ ನಡೆದಾಗ, ಬೊಬ್ಬಿರಿದ ಶಕ್ತಿಗಳು ಈಗ ಸುಮ್ಮನಾಗಿದೆ. ಕಾಂಗ್ರೆಸ್ ನಾಯಕರು ಈಗ ಪ್ರತಿಕ್ರಿಯಿಸುತ್ತಿಲ್ಲ. ಕರ್ನಾಟಕ ರಾಜ್ಯಕ್ಕೆ ಇದು ಕಳಂಕ ತಂದಿದೆ. ಘಟನೆಯನ್ನು ಇಡೀ ರಾಜ್ಯದ ಜನತೆ ಖಂಡಿಸಿದ್ದು, ಸರ್ಕಾರ ಇನ್ನೂ ಯಾವುದೇ ಗಂಭೀರ ಕ್ರಮಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಿಲ್ಲ. ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಹದಗೆಟ್ಟಿದೆ ಎನ್ನುವುದು ಸಾಕ್ಷಿಯಾಗಿದೆ ಎಂದರು.


ಪ್ರತಿಭಟನೆಯಲ್ಲಿ ಮಹಿಳಾ ಮೋರ್ಚಾದ ಸುನೀತಾ ಅಣ್ಣಪ್ಪ, ರಶ್ಮಿ ಶ್ರೀನಿವಾಸ್, ಲಕ್ಷ್ಮಿ ಶಂಕರ್‌ನಾಯಕ್, ಸುವರ್ಣ ಶಂಕರ್, ಅನಿತಾ ರವಿಶಂಕರ್, ಆರತಿ ಅ.ಮಾ.ಪ್ರಕಾಶ್, ನಗರಾಧ್ಯಕ್ಷ ಜಗದೀಶ್, ಎನ್.ಡಿ.ಸತೀಶ್, ಜ್ಞಾನೇಶ್ವರ್ ಮತ್ತಿತರರು ಇದ್ದರು.

Leave A Reply

Your email address will not be published.

error: Content is protected !!