ಯುವತಿಗೆ ಚಾಕೊಲೇಟ್ ನೀಡಿದಕ್ಕೆ ಅನ್ಯಕೋಮಿನ ಯುವಕನಿಗೆ ಥಳಿತ ; ಎರಡು ಪ್ರತ್ಯೇಕ ಪ್ರಕರಣ ದಾಖಲು

0 625

ಮೂಡಿಗೆರೆ : ನಿನ್ನೆ ಸಂಜೆ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಮುಸ್ಲಿಂ ಯುವಕ ಹಿಂದೂ ಯುವತಿಗೆ ಚಾಕೊಲೇಟ್ ನೀಡಿದ ಎಂಬ ಕಾರಣಕ್ಕೆ ಹಿಂದೂ ಯುವಕರು ಆ ಯುವಕನ್ನು ಥಳಿಸಿ ನೈತಿಕ ಪೊಲೀಸ್ ಗಿರಿ ಮೆರೆದಿದ್ದರು.

ಕಾರಿನಲ್ಲಿ ಬಂದ ನಾಲ್ವರು ಯುವಕರು, ಹಲ್ಲೆ ನಡೆಸಿದ್ದಾರೆ. ಘಟನೆಯ ಬಗ್ಗೆ ಕೂಡಲೇ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಅಧಿಕಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆಗಮಿಸಿದ ಪಿಎಸ್ಐ ಮತ್ತು ಸಿಬ್ಬಂದಿ ಮುಂದಾಗುವ ಅನಾಹುತ ತಪ್ಪಿಸಿ ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಈ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ನಾಲ್ವರ ವಿರುದ್ಧ ಪ್ರತ್ಯೇಕ ಎರಡು ಪ್ರಕರಣ‌ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಸ್ ನಿಲ್ದಾಣದಲ್ಲಿ ಪುಂಡ ಯುವಕರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಂಗಳವಾರ ಸಂಜೆ ಯುವಕನೋರ್ವನ ಮೇಲೆ ನಡೆದ ನೈತಿಕ ಪೊಲೀಸ್‌ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮೂಡಿಗೆರೆ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ.

ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾ ಪೋಲಿಸ್ ಇಲಾಖೆ ಮಾಹಿತಿ ನೀಡಿದ್ದು, ಐಪಿಸಿ ಸೆಕ್ಷನ್ 143, 144, 148, 323, 324, 504, 506, 1490 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದೆ. ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Leave A Reply

Your email address will not be published.

error: Content is protected !!