ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾನ ಜಾಗೃತಿ

0 218

ಚಿಕ್ಕಮಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆಯ ದಿನದಂದು ಮತದಾರರು ಮತದಾನದಿಂದ ದೂರ ಉಳಿಯದೆ ಶಾಂತಿಯುತ ಮತದಾನದಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ. ಗೋಪಾಲಕೃಷ್ಣ ಬಿ. ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ, ಕೃಷಿ ಇಲಾಖೆ ವತಿಯಿಂದ ಶುಕ್ರವಾರ ಸಂಜೆ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮತದಾನ ಜಾಗೃತಿಗಾಗಿ ಏರ್ಪಡಿಸಲಾಗಿದ್ದ ರಂಗೋಲಿ ಚಿತ್ರ ಬಿಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮತದಾನವು ಶಾಂತಿ, ಸುವ್ಯವಸ್ಥೆಯಿಂದ ನಡೆಯಲು ಕ್ರಮಕೈಗೊಳ್ಳಲಾಗಿದ್ದು, ಮತದಾರರು ಮತದಾನದಲ್ಲಿ ಭಾಗವಹಿಸಿ ನಿರ್ಭೀತಿಯಿಂದ ಮತ ಚಲಾಯಿಸುವಂತೆ ಹಾಗೂ ಎಲ್ಲ ಮತದಾರರು ಮತದಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಯಾರೊಬ್ಬರೂ ಮತದಾನ ಮಾಡಲು ನಿರಾಸಕ್ತಿ ತೋರಿಸಬಾರದು ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬವಾಗಿದೆ, ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸುವಂತೆ ಹೇಳಿದರು.

ಮಹಿಳೆಯರು ರಂಗೋಲಿಯ ಚಿತ್ರ ಬಿಡಿಸುವ ಮೂಲಕ ಮತದಾನದ ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತ ಜಿಲ್ಲಾ ಆಯುಷ್ ಅಧಿಕಾರಿ ಡಾ. ಗೀತಾ ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!