ಭದ್ರಾ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ

0 222

ತರೀಕೆರೆ : ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಅಭಾವವಿರುವುದರಿಂದ 2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ಬೃಹತ್/ಮಧ್ಯಮ ನೀರಾವರಿ ಜಲಾಶಯಗಳಲ್ಲಿರುವ ನೀರನ್ನು ಕುಡಿಯುವ ನೀರಿನ ಯೋಜನೆಗಳಿಗೆ ಭದ್ರಾ ನದಿಯ ಮೂಲಕ ಮಾರ್ಚ್ 29 ರಿಂದ ಏಪ್ರಿಲ್ 06 ರವರೆಗೆ ನೀರನ್ನು ಹರಿಸಲಾಗುತ್ತದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

ನದಿ ಪಾತ್ರದಲ್ಲಿ ಈ ದಿನಾಂಕಗಳಂದು ಸಾರ್ವಜನಿಕರು ತಿರುಗಾಡುವುದಾಗಲಿ, ದನಕರುಗಳನ್ನು ನದಿಗೆ ಇಳಿಸುವುದಾಗಲಿ ಇತ್ಯಾದಿ ಚಟುವಟಿಕೆಗಾಗಿ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಈ ಅವಧಿಯಲ್ಲಿ ರೈತಬಾಂಧವರು ನದಿ ದಂಡೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಪಂಪ್‌ಸೆಟ್‌ಗಳಿಂದ ನೀರೆತ್ತುವುದನ್ನೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!