ಚಂದ್ರಗುತ್ತಿ ; ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ

0 40

ಸೊರಬ : ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಶ್ರೀ ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.

ಧಾರ್ಮಿಕ ಮತ್ತು ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ವ್ರತಚಾರಣೆ ಅಂಗವಾಗಿ ದೇವಸ್ಥಾನಕ್ಕೆ ಆಗಮಿಸಿದ ಮುತ್ತೈದೆಯರಿಗೆ ಪ್ರಸಾದ ರೂಪದಲ್ಲಿ ಅರಿಷಿಣ, ಕುಂಕುಮ ಹಾಗೂ ಹಸಿರು ಬಳೆ ನೀಡಿ ಉಡಿ ತುಂಬಲಾಯಿತು.


ವಿಶೇಷವಾಗಿ ಶ್ರೀ ದೇವಿಯ ದರ್ಶನಕ್ಕೆ ತಾಲೂಕು ಮಾತ್ರವಲ್ಲದೇ ನೆರೆಯ ಶಿಕಾರಿಪುರ, ಹಿರೇಕೆರೂರು, ರಟ್ಟೆಹಳ್ಳಿ, ದಾವಣಗೆರೆ, ರಾಣೆಬೆನ್ನೂರು, ಹಾವೇರಿ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಶ್ರೀ ರೇಣುಕಾಂಬ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್, ಗ್ರಾಪಂ ಅಧ್ಯಕ್ಷೆ ಸರಿತಾ ಕೃಷ್ಣಪ್ಪ, ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಸನ್ನ ಶೇಟ್, ಸದಸ್ಯೆ ಲಲಿತಾ ಎಂ. ಶೆಟ್ಟಿ, ದೇವಸ್ಥಾನದ ಪ್ರಧಾನ ಅರ್ಚಕ ಅರವಿಂದ್ ಭಟ್ ಸೇರಿದಂತೆ ಶ್ರೀ ರೇಣುಕಾಂಬ ದೇವಿಯ ಭಕ್ತರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!