ಪ.ಜಾತಿ ಮತ್ತು ಪ.ಪಂಗಡದ ಮಹಿಳೆಯರು ಸಮಾಜದಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಿ, ಆದರ್ಶ ವ್ಯಕ್ತಿಗಳಾಗಿ

0 45

ಹೊಸನಗರ : ಗ್ರಾಮ ಪಂಚಾಯಿತಿಯಲ್ಲಿ ಆಯ್ಕೆಯಾದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಮಹಿಳೆಯರ ಕುರಿತು ಸರ್ಕಾರ ವಿಶೇಷ ಆಸಕ್ತಿ ವಹಿಸಿ ಉಚಿತವಾಗಿ ಎರಡು ದಿನಗಳು ಸಂವಿಧಾನ , ನಾಯಕತ್ವ, ಸಾಮಾಜಿಕ ನ್ಯಾಯ, ಕುರಿತು ಪ್ರತಿವೋಬ್ಬ ಮಹಿಳೆಯರಿಗೆ ಅರಿವು ಜಾಗೃತೆ ಅಭಿಯಾನ ಕಾರ್ಯಕ್ರಮ ಎರಡು ದಿನಗಳ ಕಾಲ ಏರ್ಪಡಿಸಲಾಗಿದೆ ಇದರ ಸದುಪಯೋಗ ಎಲ್ಲ ಸದಸ್ಯರುಗಳು ಪಡೆದುಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ವೈ ನರೇಂದ್ರ ಕುಮಾರ್ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಮತ್ತು ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ವತಿಯಿಂದ ಶುಕ್ರವಾರ ಮತ್ತು ಶನಿವಾರ ಬೆಳಿಗ್ಗೆ 10:30 ರಿಂದ ಸಂಜೆ 4-30 ರವರೆಗೆ ತಾಲ್ಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ತಾಲೂಕಿನ 30 ಗ್ರಾ.ಪಂ.ಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳಾ ಸದಸ್ಯರಿಗೆ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಮ ಪಂಚಾಯಿತ ಪ್ರತಿನಿಧಿಗಳು ಆದರ್ಶ ವ್ಯಕ್ತಿಗಳಾಗಬೇಕು ಆಗ ಮಾತ್ರ ಆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಸಾಧ್ಯ, ಸರ್ಕಾರ ನೀಡುವ ಯೋಜನೆಗಳು ಮತ್ತು ವ್ಯವಸ್ಥೆಗಳ ಸಂಪೂರ್ಣ ಮಾಹಿತಿ ಸದಸ್ಯರು ಪಡೆದು ಕೊಂಡರೆ ಅಧಿಕಾರಿಗಳೊಂದಿಗೆ ಚರ್ಚಿಸಲು ಹಾಗೂ ಫಲಾನುಭವಿಗಳಿಗೆ ಅನುದಾನ ತಲುಪಿಸಲು ಸಾಧ್ಯವಾಗುತ್ತದೆ ಎಂದು ಗ್ರಾಮ ಪಂಚಾಯಿತಿಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳಾ ಸದಸ್ಯರಿಗೆ ಸಹಾಯಕ ನಿರ್ದೇಶಕ ರಾಜೇಂದ್ರ ಕುಮಾರ್ ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ರೇಖಾ ವರ್ತೆಶ್, ಪಾರ್ವತಿ ಇವರು ಮಾಹಿತಿ ನೀಡಿದರು. ತಾ.ಪಂ ಮ್ಯಾನೇಜರ್ ಶಿವಕುಮಾರ್, ಮಂಜುನಾಥ ವೇದಿಕೆಯಲ್ಲಿ
ಉಪಸ್ಥಿತರಿದ್ದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳಾ ಚುನಾಯಿತ ಸದಸ್ಯರುಗಳು ಕಡ್ಡಾಯವಾಗಿ ಹಾಜರಾಗಲು ಅಗತ್ಯ ಕ್ರಮವಹಿಸಲು ಸೂಚಿಸಿದ ಕಾರಣ ಎಲ್ಲರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

Leave A Reply

Your email address will not be published.

error: Content is protected !!