ಪತ್ರಕರ್ತ ಎಲ್.ಪಿ.ಜಗದೀಶ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

0 327

ಎನ್.ಆರ್.ಪುರ: ಬಾಳೆಹೊನ್ನೂರಿನ ಪತ್ರಕರ್ತ, ಛಾಯಾಗ್ರಾಹಕ ಎಲ್.ಪಿ.ಜಗದೀಶ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ಸದಾ ಲವಲವಿಕೆಯಿಂದ ಕ್ರಿಯಾಶೀಲರಾಗಿ ಇರುತ್ತಿದ್ದ ಎಲ್.ಪಿ.ಜಗದೀಶ ಪತ್ರಕರ್ತರಲ್ಲದೇ ಉತ್ತಮ ಛಾಯಾಗ್ರಾಹಕರಾಗಿದ್ದರು. ಶ್ರೀ ಪೀಠದೊಡನೆ ಮಧುರ ಸಂಬಂಧ ಹೊಂದಿದ್ದ ಅವರ ಅಗಲಿಕೆ ನೋವನ್ನುಂಟು ಮಾಡಿದೆ. ಮೃತರ ಪವಿತ್ರ ಆತ್ಮಕ್ಕೆ ದಯಾಘನನಾದ ಪರಮಾತ್ಮನು ಚಿರಶಾಂತಿ ನೀಡಲಿ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ನೀಡಲಿ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!