ಅಧಿಕಾರ ಸ್ವೀಕರಿಸುವ ಮುನ್ನವೇ ಆ ಶಿಕ್ಷಕ ನಮ್ಮ ಶಾಲೆಗೆ ಬೇಡ ಎಂದ ವಿದ್ಯಾರ್ಥಿಗಳು, ಪೋಷಕರು ! ಯಾಕೆ ಗೊತ್ತಾ ?

0 166



ರಿಪ್ಪನ್‌ಪೇಟೆ: ಇತ್ತೀಚೆಗೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಮುಖ್ಯೋಪಾಧ್ಯಾಯ ಗಂಗಾನಾಯ್ಕ್ ಎಂಬುವರು ಸರಿಯಾಗಿ ಶಾಲೆಗೆ ಹಾಜರಾಗುತ್ತಿಲ್ಲ ಮತ್ತು ನಗದು ವ್ಯವಹಾರದಲ್ಲಿ ಸಾಕಷ್ಟು ದೋಷ ಎಸಗಿದ್ದಾರೆಂದು ಆರೋಪಿಸಿ ಶಾಲಾ ಪೋಷಕವರ್ಗ ಪ್ರತಿಭಟನೆ ನಡೆಸಿದರ ಹಿನ್ನೆಲೆಯಲ್ಲಿ ಅಮಾನತುಪಡಿಸಲಾಗಿದ್ದ ಮುಖ್ಯೋಪಾಧ್ಯಾಯನನ್ನು ರಿಪ್ಪನ್‌ಪೇಟೆಯ ಗವಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಏಕಾಏಕಿ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಇಂದು ಗವಟೂರು ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು, ಪೋಷಕ ವರ್ಗ ಪ್ರತಿಭಟನೆ ನಡೆಸಿದರು.


ಅಮಾನತು ಮಾಡಲಾದ ಮುಖ್ಯೋಪಾಧ್ಯಾಯ ಗಂಗಾನಾಯ್ಕ್ ಇವರನ್ನು ಏಕಾಏಕಿ ಗವಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ವರ್ಗಾಯಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಮತ್ತು ಪೋಷಕವರ್ಗ ವಿದ್ಯಾರ್ಥಿ ವೃಂದ ಇಂದು ಶಾಲೆಯ ಮುಂಭಾಗದಲ್ಲಿ ದಿಢೀರ್ ಪ್ರತಿಭಟನೆ ನಡೆಸುವ ಮೂಲಕ ಅಧಿಕಾರ ಸ್ವೀಕರಿಸದಂತೆ ತಡೆ ನೀಡಿ ನಮ್ಮೂರಿಗೆ ಈ ಮುಖ್ಯೋಪಾಧ್ಯಾಯ ಬೇಡವೇ ಬೇಡ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.


ಪ್ರತಿಭಟನಾ ಸ್ಥಳಕ್ಕೆ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಜಿಲ್ಲಾ ಸಾರ್ವಜನಿಕ ಉಪನಿರ್ದೇಶಕರು ಬರುವವರೆಗೂ ನಾವು ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಎಸ್.ಡಿ.ಎಂ.ಸಿ. ಅಧ್ಯಕ್ಷ ಸೀತರಾಮ್, ಗ್ರಾ.ಪಂ.ಮಾಜಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಸದಸ್ಯರಾದ ಜಿ.ಡಿ.ಮಲ್ಲಿಕಾರ್ಜುನ, ಗಣಪತಿ ಗವಟೂರು ಎಸ್.ಡಿ.ಎಂ.ಸಿ. ಸದಸ್ಯರುಗಳು ಗ್ರಾಮಸ್ಥರು, ವಿದ್ಯಾರ್ಥಿ ಸಮೂಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್,ಕೃಷ್ಣಮೂರ್ತಿ ಭೇಟಿ ನೀಡಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವುದರೊಂದಿಗೆ ಈ ಶಾಲೆಗೆ ಮುಖ್ಯ ಶಿಕ್ಷಕ ಗಂಗಾನಾಯ್ಕ್ ನೇಮಕಾತಿಯನ್ನು ರದ್ದುಗೊಳಿಸಿ ಆದೇಶಿಸುವ ಬಗ್ಗೆ ಭರವಸೆ ನೀಡಿದರ ಹಿನ್ನೆಲೆಯಲ್ಲಿ ಪ್ರತಿಭಟನಾನಿರತರು ಪ್ರತಿಭಟನೆಯನ್ನು ಹಿಂಪಡೆದರು.

Leave A Reply

Your email address will not be published.

error: Content is protected !!