ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ; ತೀರ್ಥಹಳ್ಳಿಯಲ್ಲಿ NIA ದಾಳಿ

0 589

ತೀರ್ಥಹಳ್ಳಿ : ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಂದು ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.

ತೀರ್ಥಹಳ್ಳಿ ಪಟ್ಟಣದ 5ಕ್ಕೂ ಹೆಚ್ಚು ಕಡೆ ಎನ್‌ಐಎ ತಂಡ ತನಿಖೆ ಆರಂಭಿಸಿದೆ. ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ಬೆಂಗಳೂರಿನಿಂದ 5 ಕ್ಕೂ ವಾಹನದಲ್ಲಿ ಬಂದಿರುವ 15 ಕ್ಕೂ ಹೆಚ್ಚು ಎನ್‌ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಸ್ಥಳೀಯ ಪೊಲೀಸರ ನೆರವಿನೊಂದಿಗೆ ದಾಳಿ ಮಾಡಿದ್ದು, ಕೆಲ ಶಂಕಿತರ ಮನೆಗಳಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಕೆಲವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ತೀರ್ಥಹಳ್ಳಿ ಮೂಲದ ಪ್ರಮುಖ ಶಂಕಿತ ಮುಸ್ಸಾವಿರ್ ಹುಸೇನ್ ಶಾಜಿಬ್ ಅನ್ನು ಮಾರ್ಚ್ 23 ರಂದು ಗುರುತಿಸಲಾಗಿದೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ. ಪ್ರಮುಖ ಆರೋಪಿಯನ್ನು ಗುರುತಿಸಲು ಸಂಸ್ಥೆಯು 1,000 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದೆ.

ಈ ಸ್ಫೋಟದ ಹಿಂದೆ ಶಿವಮೊಗ್ಗ ಐಸಿಸ್ ಮಾಡ್ಯೂಲ್ ಕೈವಾಡವಿರಬಹುದು ಎಂದು ತನಿಖಾ ಸಂಸ್ಥೆಯ ಮೂಲಗಳು ಈ ಹಿಂದೆ ಹೇಳಿದ್ದವು.

ಬಾಂಬ್ ದಾಳಿಯ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿದ್ದು, ಶಂಕಿತನ ಸಿಸಿಟಿವಿ ಚಿತ್ರಗಳು ಮತ್ತು ವಿಡಿಯೋಗಳನ್ನು ಬಿಡುಗಡೆ ಮಾಡಿದೆ.

Leave A Reply

Your email address will not be published.

error: Content is protected !!