Loksabha Election 2024 | ಲೋಕಸಭಾ ಚುನಾವಣೆ ದಿನಾಂಕ ಪ್ರಕಟ, ಕರ್ನಾಟಕದಲ್ಲಿ ಮತದಾನ ಯಾವಾಗ ಗೊತ್ತಾ ?

0 557

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ.

ಏಪ್ರಿಲ್ 19 ಮೊದಲ ಹಂತ, ಏಪ್ರಿಲ್ 26 2ನೇ ಹಂತ, ಮೇ 7ರಂದು ಮೂರನೇ ಹಂತ, ಮೇ 13 ನಾಲ್ಕನೇ ಹಂತ, ಮೇ 20ರಂದು 5ನೇ ಹಂತ, ಮೇ 25ರಂದು 6ನೇ ಹಂತ, ಜೂನ್ 1ರಂದು 7ನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಮೊದಲೇ ಹಂತದಲ್ಲಿ ಮತದಾನ ನಡೆಯಲಿದ್ದು, ಉತ್ತರ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ಏಪ್ರಿಲ್ 26ರಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಮೇ 7ರಂದು 2ನೇ ಹಂತದಲ್ಲಿ ಮತದಾನ ನಡೆಯಲಿದೆ.

ಲೋಕಸಭಾ ಚುನಾವಣೆ ನಡೆಸಲು ಚುನಾವಣಾ ಆಯೋಗ ಸರ್ವಸನ್ನದ್ಧವಾಗಿದೆ. ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ,  ಮುಕ್ತ ನ್ಯಾಯಸಮ್ಮತ ಚುನಾವಣೆ ನಡೆಸುವುದು ನಮ್ಮ ಉದ್ದೇಶ ಎಂದರು.

ದೇಶಾದ್ಯಂತ 10.5 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ದೇಶದಲ್ಲಿ 97 ಕೋಟಿ ಮತದಾರರಿದ್ದಾರೆ. 1.5 ಕೋಟಿ ಭದ್ರತಾ ಅಧಿಕಾರಿಗಳು, ಭದ್ರತಾ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗುವುದು ಎಂದು ತಿಳಿಸಿದರು.

1.8 ಕೋಟಿ ಹೊಸ ಮತದಾರರು ಈ ಬಾರಿ ಮತಚಲಾಯಿಸಲಿದ್ದಾರೆ. 49.7 ಪುರುಷ ಮತದಾರರಿದ್ದಾರೆ. 49.1 ಕೋಟಿ ಮತದಾರಿದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತಚ ಲಾಯಿಸಲಿದ್ದಾರೆ. 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ.  48 ಸಾವಿರ ತೃತೀಯ ಲಿಂಗಿ ಮತದಾರರಿದ್ದಾರೆ. ಈ ಬಾರಿ 2.18 ಲಕ್ಷ 100 ವರ್ಷಕ್ಕೂ ಮೇಲ್ಪಟ್ಟ ಹಿರಿಯರು ಮತಚಲಾಯಿಸಲಿದ್ದಾರೆ.

12 ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಳವಾಗಿದೆ. ಪುರುಷ ಮತದಾರರಿಗಿಂತಲೂ ಮಹಿಳಾ ಮತದಾರರ ಸಂಖ್ಯೆ ಹೆಚ್ಚಳವಿದೆ. 40% ವಿಕಲ ಚೇತನರು ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗಿದೆ. ಮತದಾನ ಕೇಂದ್ರಗಳಲ್ಲಿ ನೀರು, ಶೌಚಾಲಯ, ಹೆಲ್ಪ್​ಡೆಸ್ಕ್​, ವಿದ್ಯುತ್​ ಸೇರಿ ಮೂಲಕ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು.

ಮತದಾನಕ್ಕೆ 55 ಲಕ್ಷ ಇವಿಎಂ ಮಷಿನ್ ಗಳ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳ ಕ್ರಿಮಿನಲ್ ಕೇಸ್ ಗಳ ಬಗ್ಗೆ ಮಾಹಿತಿ ಕಡ್ಡಾಯವಾಗಿ ನೀಡಬೇಕು. ಹಿಂಸಾಮುಕ್ತ ಚುನಾವಣೆ ಮಾಡಲು ಸಿದ್ಧತೆ ಮಾಡಲಾಗುತ್ತದೆ. ಬಾರ್ಡರ್ ಗಳಲ್ಲಿ ಡ್ರೋಣ್ ಮೂಲಕ ಕಟ್ಟೆಚ್ಚರ ವಹಿಸಲಾಗುತ್ತದೆ.

ಹಿಂಸಾಚಾರ ನಡೆಸಿದರೆ ಸೂಕ್ತ ಕ್ರಮಕೈಗೊಳ್ಳುತ್ತೇವೆ. ಪಕ್ಷಗಳು ನೀತಿ ಸಂಹಿತೆಯನ್ನು ಪಾಲಿಸಬೇಕು, ಮತದಾರರಿಗೆ ಹಣ ಹಂಚಿದರೆ, ಅಕ್ರಮ ಸಾಗಾಟ ಮಾಡಿದರೆ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದರು.

Leave A Reply

Your email address will not be published.

error: Content is protected !!