ಹುಲಿ ಅಂಗಾಂಗ‌ ಮಾರಾಟ ಯತ್ನ, ಇಬ್ಬರ ಬಂಧನ

0 482

ಚಿಕ್ಕಮಗಳೂರು : ಹುಲಿ (Tiger) ಅಂಗಾಂಗ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.

ಚಿಕ್ಕಮಗಳೂರು (Chikkamagaluru) ಹೊರ ವಲಯದ ಮತ್ತಾವರ ಬಳಿ ಹುಲಿ ತಲೆ, ನಾಲ್ಕು ಉಗುರು, ಎರಡು ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ವಿಚಾರ ತಿಳಿದು ಡಿಎಫ್ಒ ರಮೇಶ್ ಬಾಬು ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ, ಹುಲಿ ಅಂಗಾಂಗ ಮಾರಾಟ ಮಾಡಲು ಮುಂದಾಗಿದ್ದ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದ ಸತೀಶ್, ಚಂದ್ರೇಗೌಡ ಎಂಬುವರನ್ನು ಬಂಧಿಸಿದ್ದಾರೆ.

ಮೂಡಿಗೆರೆ ಅರಣ್ಯ ಇಲಾಖೆಯ ಕಚೇರಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಂದ ಹುಲಿ ತಲೆ, ಹುಲಿ ಉಗುರು, ಹಲ್ಲು, ಬೈಕ್ ಸೇರಿದಂತೆ ನಾಲ್ಕು ಮೊಬೈಲ್ಗಳನ್ನ ಅರಣ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಈ ಹಿಂದೆಯೂ ಹುಲಿ ಅಂಗಾಂಗ ಮಾರಾಟ ಮಾಡುವಾಗ ಇಬ್ಬರು ಆರೋಪಿಗಳು ಸಿಕ್ಕಿ ಬಿದ್ದಿದ್ದರು.

Leave A Reply

Your email address will not be published.

error: Content is protected !!