2nd PUC Result 2024 |  ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ. 95.03 ಫಲಿತಾಂಶ

0 452

ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನ ಪ್ರತಿಷ್ಠಿತ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 95.03 ಫಲಿತಾಂಶ ಪಡೆದುಕೊಂಡಿದೆ.

ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 161 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

43 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 82 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 28 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಇದರಲ್ಲಿ ಕಲಾ ವಿಭಾಗ 100%, ವಿಜ್ಞಾನ ವಿಭಾಗದಲ್ಲಿ 98.70%, ವಾಣಿಜ್ಯ ವಿಭಾಗ 87.50% ಫಲಿತಾಂಶ ಬಂದಿದೆ.

ಕಾಲೇಜಿನ ಹಂತದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ
ರೂಪೇಶ್ : 580 – ವಿಜ್ಞಾನ ವಿಭಾಗ
ಸ್ಪಂದನ : 571- ವಾಣಿಜ್ಯ ವಿಭಾಗ
ನಯನ : 570 ಕಲಾ ವಿಭಾಗ
ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಾಗಿದ್ದಾರೆ.

ಅತ್ಯುತ್ತಮವಾದ ಫಲಿತಾಂಶಗಳನ್ನು ಪಡೆದುಕೊಳ್ಳುವುದರ ಮೂಲಕ ಕಾಲೇಜಿಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗಕ್ಕೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ ಆರಗ ಜ್ಞಾನೇಂದ್ರ ಉಪಾಧ್ಯಕ್ಷ ಸೋಮಶೇಖರ್ ಮತ್ತು ಸದಸ್ಯರು ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ಕಾಲೇಜಿನ ಪ್ರಾಚಾರ್ಯ ಮಹಮದ್ ನಜಹತ್ ಉಲ್ಲಾ ಅಭಿನಂದನೆ ಸಲ್ಲಿಸಿದ್ದಾರೆ.

Leave A Reply

Your email address will not be published.

error: Content is protected !!