ತೋಟಗಾರಿಕಾ ಇಲಾಖೆಯಲ್ಲಿ ಸಹಾಯಧನ ಸೌಲಭ್ಯ ನೀಡಲು ಅರ್ಜಿ ಆಹ್ವಾನ

0 90


ಶಿವಮೊಗ್ಗ :‌ 2023-24 ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಉಪ ಅಭಿಯಾನದ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ರೈತರು ಖರೀದಿಸುವ ಉತ್ಕೃಷ್ಟ ಗುಣಮಟ್ಟದ ಉಪಕರಣಗಳಿಗೆ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.


ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿಸಣ್ಣ ಹಾಗೂ ಮಹಿಳಾ ಫಲಾನುಭವಿಗಳಿಗೆ ಶೇ.50 ರಷ್ಟು ಮತ್ತು ಇತರೆ/ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ರಷ್ಟು ಸಹಾಯಧನ ಲಭ್ಯವಿರುತ್ತದೆ. ಅರ್ಜಿ ಸಲ್ಲಿಸಲು ಸೆ.25 ಕೊನೆಯ ದಿನವಾಗಿರುತ್ತದೆ.


ರೈತರು ಇಲಾಖೆಯಿಂದ ಅನುಮೋದನೆಗೊಂಡ ಯಂತ್ರೋಪಕರಣದ ಉತ್ಪಾದಕರು ಮತ್ತು ಸರಬರಾಜುದಾರರಿಂದ ಖರೀದಿಸಿದ್ದಲ್ಲಿ ಮಾತ್ರವೇ ಸಹಾಯಧನ ಲಭ್ಯವಾಗುವುದು. ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಜಿಲ್ಲಾ ಪಂಚಾಯತ್ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪಂಚಾಯತ್‍ನ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನ
ಶಿವಮೊಗ್ಗ :
2023-24 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆಯಡಿ ಸೌಲಭ್ಯ ನೀಡಲು ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.


ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿದ್ದು (ಕಾಫಿ, ಟೀ ಹಾಗೂ ರಬ್ಬರ್ ಬೆಳೆಗಳನ್ನು ಹೊರತುಪಡಿಸಿ) ಹನಿ ನೀರಾವರಿ ಅಳವಡಿಸಿದ ಎಲ್ಲಾ ವರ್ಗದ ಫಲಾನುಭವಿಗೆ ಗರಿಷ್ಟ 5 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುವುದು.


ತರಕಾರಿ ಮತ್ತು ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ನೀಡಲಾಗುವುದು. ಸೂಕ್ಷ್ಮ ನೀರಾವರಿ ಘಟಕ ಅಳವಡಿಸಿದ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತ ಫಲಾನುಭವಿಗಳಿಗೆ ಮೊದಲ 2 ಹೆಕ್ಟೇರ್ ಪ್ರದೇಶದವರೆಗೆ ಶೇ.90 ರಷ್ಟು ಮತ್ತು ಇತರೆ ವರ್ಗದ ರೈತ ಫಲಾನುಭವಿಗಳಿಗೆ ಮೊದಲ 2 ಹೆಕ್ಟೇರ್ ಪ್ರದೇಶದವರೆಗೆ ಶೇ.75 ರಷ್ಟು ಸಹಾಯಧನ ಲಭ್ಯವಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ರೈತ ಫಲಾನುಭವಿಗಳಿಗೆ 2 ಹೆಕ್ಟೇರ್ ಮೇಲ್ಪಟ್ಟು 3 ಹೆಕ್ಟೇರ್‍ಗೆ ಶೇ.45 ರಷ್ಟು ಸಹಾಯಧನ ನೀಡಲು ಅವಕಾಶ ಕಲ್ಪಿಸಲಾಗಿದೆ.

ಈ ಹಿಂದೆ ಅರ್ಜಿ ಸಲ್ಲಿಸಿ ಸಹಾಯಧನ ಪಡೆಯದಿದ್ದಲ್ಲಿ ಅಂತಹ ಅರ್ಜಿಗಳನ್ನು ಪ್ರಸಕ್ತ ವರ್ಷ ಸಹಾಯಧನಕ್ಕೆ ಪರಿಗಣಿಸುವುದಿಲ್ಲ. ಇಲಾಖೆಯಿಂದ ಅನುಮೋದಿತ ಕಂಪನಿಗಳ ಮಾಹಿತಿ ಹಾಗು ಹೆಚ್ಚಿನ ವಿವರಗಳನ್ನು ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕಾ ಅಧಿಕಾರಿಗಳು ಅಥವಾ ಕಚೇರಿಯಿಂದ ಪಡೆಯಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!