KADURU ; ಕಟಿಂಗ್ ಶಾಪೊಂದರಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ.
ಕಡೂರು ಪಟ್ಟಣದ ಕಟಿಂಗ್ ಶಾಪೊಂದಕ್ಕೆ 8 ವರ್ಷದ ಮಗುವನ್ನ ಆಕೆಯ ತಾಯಿ ಕಟ್ಟಿಂಗ್ ಗಾಗಿ ಕರೆದುಕೊಂಡು ಬಂದಿದ್ದಳು. ಈ ವೇಳೆ ಬಾಲಕಿ ತಾಯಿ ಮನೆ ಬಾಗಿಲಿಗೆ ಬೀಗ ಹಾಕಿಲ್ಲ ಎಂದು ಮನೆಗೆ ಹೋಗಿ ಬರುತ್ತೇನೆಂದು ಬಾಲಕಿಯನ್ನು ಅಲ್ಲೇ ಬಿಟ್ಟು ಹೋಗಿದ್ದಾಳೆ.
ಇದೇ ಸಮಯವನ್ನು ಉಪಯೋಗಿಸಿಕೊಂಡ ಕಾಮುಕ ಮಾಲೀಕ, ಕಟಿಂಗ್ ಶಾಪ್ ಡೋರ್ ಕ್ಲೋಸ್ ಮಾಡಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಇತ್ತ ಮನೆಗೆ ಹೋಗಿ ಮರಳಿ ಬರುವಷ್ಟರಲ್ಲಿ ಮಗು ಕಿರುಚಿಕೊಂಡ ಶಬ್ಧ ಕೇಳಿ ತಾಯಿ ಕೂಡ ಕಿರುಚಾಡಿದ್ದಾರೆ.
ಈ ವೇಳೆ ಸಲೂನ್ ವ್ಯಕ್ತಿ ಮಗುವಿಗೆ ಲೈಂಗಿಕ ದೌರ್ಜನ್ಯ ನೀಡಿದ್ದಾನೆಂದು ಆರೋಪಿಸಿ ಒಂದು ಕೋಮಿನ ಸಾವಿರಾರು ಜನ ಸೇರಿ ಕಟ್ಟಿಂಗ್ ಶಾಪ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಕಟ್ಟಿಂಗ್ ಶಾಪ್ ವ್ಯಕ್ತಿಯ ಮೇಲೂ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಸಲೂನ್ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಕಲ್ಲು ತೂರಾಟ ನಡೆಸಿದ್ದು ಈ ವೇಳೆ ನಾಲ್ವರು ಮಹಿಳೆಯರಿಗೆ ಕಲ್ಲು ಬಿದ್ದು ಗಾಯಗಳಾಗಿವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಚ್ ನಡೆಸಿದ್ದಾರೆ.
ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಸಲೂನ್ ವ್ಯಕ್ತಿ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.