1 ರಿಂದ 5ನೇ ತರಗತಿಗಳ ಪುನರಾರಂಭದ ಬಗ್ಗೆ ಸದ್ಯದಲ್ಲೇ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

0
310

ಶಿವಮೊಗ್ಗ : ಸದ್ಯದಲ್ಲಿಯೇ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಪಡೆದು 1 ರಿಂದ 5ನೇ ತರಗತಿಗಳನ್ನು ತೆರೆಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತರಗತಿಗಳು ಪುನರಾರಂಭ ಮಾಡುವ ಕುರಿತು ಸಮಿತಿಯ ಮುಂದೆ ವಿಷಯ ಮಂಡಿಸಲಾಗುತ್ತದೆ. ಸದ್ಯ ತರಗತಿಗಳಲ್ಲಿ ಮಕ್ಕಳಿಗೆ ಬ್ರಿಡ್ಜ್ ಕೋರ್ಸ್ ಆರಂಭಿಸಲಾಗುತ್ತಿದೆ ಎಂದರು.

ಪಠ್ಯಕ್ರಮ ಪೂರ್ಣ ಮಾಡುವುದರಿಂದ ಮಕ್ಕಳಿಗೆ ಲಾಭವಾಗುತ್ತದೆ. ಈಗಾಗಲೇ ಮಕ್ಕಳು ಸಾಕಷ್ಟು ತರಗತಿಗಳನ್ನು ಕಳೆದುಕೊಂಡಿದ್ದಾರೆ. ಪಠ್ಯಕ್ರಮ ಕಡಿಮೆ ಮಾಡುವ ಬಗ್ಗೆ ಇನ್ನೂ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ.‌ ರಜೆ ಕಡಿಮೆ ಮಾಡಿ ಇನ್ನಷ್ಟು ತರಗತಿ ನಡೆಸಬಹುದೇ ಎಂಬುವುದರ ಕುರಿತು ಚಿಂತನೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here