ಹೊಸನಗರ

ದ್ವಿತೀಯ ಪಿಯು ಫಲಿತಾಂಶ ; ಹೊಸನಗರ ಹೋಲಿ ರಿಡೀಮರ್ ಕಾಲೇಜ್‌ಗೆ ಶೇ. 100 ಫಲಿತಾಂಶ

ಹೊಸನಗರ ; ಪಟ್ಟಣದ ಹೋಲಿ ರಿಡೀಮರ್ ಪದವಿ ಪೂರ್ವ ಕಾಲೇಜ್‌ಗೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪರೀಕ್ಷೆಗೆ ಕುಳಿತಿದ್ದ 80 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು ಶೇ. 100 ಫಲಿತಾಂಶ ಬಂದಿದೆ.

WhatsApp Group Join Now
Telegram Group Join Now
Instagram Group Join Now

ಫಲಿತಾಂಶ ಗಳಿಕೆಯಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದು 46 ಬಾಲಕಿಯರು ಹಾಗೂ 34 ಬಾಲಕರು ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಈ ಎಸ್ ಸಾನಿಕಾ 600 ಅಂಕಕ್ಕೆ 588 ಅಂಕ ಗಳಿಸಿ ಶೇ. 98 ಫಲಿತಾಂಶ ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಎಂ ಜಿ ಶಮಿತಾ 600 ಅಂಕಕ್ಕೆ 582 ಅಂಕ ಗಳಿಸಿ ಶೇ. 97 ಫಲಿತಾಂಶ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಎಂ ಎನ್ ಅನನ್ಯ 600 ಅಂಕಗಳಿಗೆ 581 ಅಂಕ ಗಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]