Ripponpete

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಸಾಧನೆ ; ಹರತಾಳು ಬೂತ್‌ನಲ್ಲಿ ಶೇ.100 ಮತದಾರರ ಪಟ್ಟಿ ಪರಿಷ್ಕರಣೆ !

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಸಾಧನೆ ; ಹರತಾಳು ಬೂತ್‌ನಲ್ಲಿ ಶೇ.100 ಮತದಾರರ ಪಟ್ಟಿ ಪರಿಷ್ಕರಣೆ ! – InShot 20260721 214346763

ರಿಪ್ಪನ್‌ಪೇಟೆ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂತ್ ಸಂಖ್ಯೆ 195ರಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯವು ಶೇ.100ರಷ್ಟು ಪೂರ್ಣಗೊಂಡಿದ್ದು, ಕ್ಷೇತ್ರದಲ್ಲೇ ಈ ಸಾಧನೆ ಮಾಡಿದ ಮೊದಲ ಬೂತ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

WhatsApp Group Join Now
Telegram Group Join Now
Instagram Group Join Now

ಈ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕಾವ್ಯಾ, ಗ್ರಾಮ ಲೆಕ್ಕಾಧಿಕಾರಿ ಶೋಭಾ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪರಮೇಶ್ವರ್ ಬಿ.ಬಿ. ಅವರನ್ನು ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹೆಚ್. ಹರತಾಳು ಹಾಲಪ್ಪ ಅಭಿನಂದಿಸಿದರು.

ಬೂತ್ ಸಂಖ್ಯೆ 195ರ ಬಿಎಲ್‌ಎ–2 ಆಗಿಯೂ ಕಾರ್ಯನಿರ್ವಹಿಸಿದ್ದ ಹರತಾಳು ಹಾಲಪ್ಪ ಅವರು ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ದಾಖಲೆಗಳಿಗೆ ಸಹಿ ಹಾಕಿ, ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಶ್ರಮಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಹಕರಿಸಿದ ಪಕ್ಷದ ಕಾರ್ಯಕರ್ತರ ಕಾರ್ಯವನ್ನು ಅವರು ಶ್ಲಾಘಿಸಿದರು. ಮತದಾರರ ಪಟ್ಟಿಯ ನಿಖರತೆ ಮತ್ತು ಸಮಗ್ರತೆಯನ್ನು ಖಚಿತಪಡಿಸುವಲ್ಲಿ ಎಲ್ಲರ ಸಹಕಾರ ಮಹತ್ವದ್ದಾಗಿದೆ ಎಂದು ಹೇಳಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]