ಹೊಸನಗರ

ಹಾವು ಕಚ್ಚಿ ರೈತ ಅಸ್ವಸ್ಥ; ಶಿವಮೊಗ್ಗಕ್ಕೆ ಕರೆದೊಯ್ಯಲು 108 ಸಿಬ್ಬಂದಿ ಹಿಂದೇಟು, ಸಾರ್ವಜನಿಕರ ಆಕ್ರೋಶ

ಜಮೀನಿನಲ್ಲಿ ಹುಲ್ಲು ಕೊಯ್ಯುತ್ತಿದ್ದ ರೈತನಿಗೆ ನಾಗರಹಾವು ಕಚ್ಚಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಸಾಗಿಸಲು 108 ಆಂಬುಲೆನ್ಸ್ ಸಿಬ್ಬಂದಿ ನಿರಾಕರಿಸಿದ ಘಟನೆ ಶನಿವಾರ ನಡೆದಿದೆ.

ಹಾವು ಕಚ್ಚಿ ರೈತ ಅಸ್ವಸ್ಥ; ಶಿವಮೊಗ್ಗಕ್ಕೆ ಕರೆದೊಯ್ಯಲು 108 ಸಿಬ್ಬಂದಿ ಹಿಂದೇಟು Snake Bite

ಹೊಸನಗರ: ಜಮೀನಿನಲ್ಲಿ ಹುಲ್ಲು ಕೊಯ್ಯುತ್ತಿದ್ದ ರೈತನಿಗೆ ನಾಗರಹಾವು ಕಚ್ಚಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಸಾಗಿಸಲು 108 ಆಂಬುಲೆನ್ಸ್ ಸಿಬ್ಬಂದಿ ನಿರಾಕರಿಸಿದ ಘಟನೆ ಶನಿವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ತಾಲೂಕಿನ ನಗರ ಸಮೀಪವಿರುವ ಕಾಡಿಗೆರೆ ಗ್ರಾಮದ ರೈತ ಉಮೇಶ್ ಹಾವು ಕಡಿತಕ್ಕೆ ಒಳಗಾದವರು. ಘಟನೆ ನಡೆದ ತಕ್ಷಣ ಅವರನ್ನು ನಗರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೊಸನಗರದ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ರೋಗಿಯ ಸ್ಥಿತಿ ಗಂಭೀರವಾಗಿದ್ದರಿಂದ ವೈದ್ಯರು ಶಿವಮೊಗ್ಗಕ್ಕೆ ರೆಫರ್ ಮಾಡಿದ್ದರು.

ಈ ವೇಳೆ ಉಮೇಶ್ ಅವರನ್ನು ಶಿವಮೊಗ್ಗಕ್ಕೆ ಕರೆದೊಯ್ಯಲು 108 ಆಂಬುಲೆನ್ಸ್ ಸಿಬ್ಬಂದಿ ಒಪ್ಪಲಿಲ್ಲ. “ರೆಫರ್ ಆದ ಪ್ರಕರಣಗಳನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ಸಾಗಿಸಲು ನಮ್ಮ ನಿಯಮಗಳಲ್ಲಿ ಅವಕಾಶವಿಲ್ಲ” ಎಂಬುದು ಸಿಬ್ಬಂದಿಯ ವಾದವಾಗಿತ್ತು.

ತುರ್ತು ಪರಿಸ್ಥಿತಿಯಲ್ಲಿದ್ದ ಈ ನಿಯಮದ ನೆಪವೊಡ್ಡಿದ್ದಕ್ಕೆ ಆಸ್ಪತ್ರೆ ಆವರಣದಲ್ಲಿದ್ದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕರಾದ ರಾಜೇಶ್ ಹಿರಿಮನೆ ಮತ್ತು ನಗರ ನಿತಿನ್ ಸೇರಿದಂತೆ ಸ್ಥಳೀಯರು ಆಂಬುಲೆನ್ಸ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಜನರ ತೀವ್ರ ಒತ್ತಾಯದ ಬಳಿಕವಷ್ಟೇ ಅದೇ 108 ವಾಹನದಲ್ಲಿ ಉಮೇಶ್ ಅವರನ್ನು ಶಿವಮೊಗ್ಗದ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು.

ಹಾವು ಕಡಿತದಂತಹ ಜೀವನ್ಮರಣದ ಹೋರಾಟದ ಸಮಯದಲ್ಲೂ ನಿಯಮಗಳ ಹೆಸರಿನಲ್ಲಿ ಆಂಬುಲೆನ್ಸ್ ಸೇವೆ ನಿರಾಕರಿಸುತ್ತಿರುವುದಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದು, 108 ತುರ್ತು ಸೇವೆಯ ಮಾರ್ಗಸೂಚಿಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!