ಜ.10 ರಂದು ಹೊಸನಗರದಲ್ಲಿ 11ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ; ನಗರ ರಾಘವೇಂದ್ರ

Written by malnadtimes.com

Published on:

HOSANAGARA ; ಇಲ್ಲಿನ ಖಾಸಗಿ ಶಾಲೆಯಾದ ಗುರೂಜಿ ಇಂಟರ್ ನ್ಯಾಶನಲ್ ರೆಸಿಡೆನ್ಸಿಯಲ್ ಸ್ಕೂಲ್‌ನ ಆವರಣದಲ್ಲಿ ಜ.10 ರಂದು ಹೊಸನಗರ ತಾಲ್ಲೂಕು 11ನೇ ಮಕ್ಕಳ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ನಗರ ರಾಘವೇಂದ್ರ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಅವರು ಸುದ್ಧಿಗಾರರೊಂದಿಗೆ ಮಾತನಾಡಿ, ಈ ಕಾರ್ಯಕ್ರಮವು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹೊಸನಗರ, ಕನ್ನಡ ಸಾಹಿತ್ಯ ಪರಿಷತ್ ಹೊಸನಗರ, ತಾಲ್ಲೂಕು ಪಂಚಾಯತಿ ಹೊಸನಗರ, ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸನಗರ, ಗುರೂಜಿ ಇಂಟರ್ ನ್ಯಾಶನಲ್ ರೆಸಿಡೆನ್ಸಿಯಲ್ ಸ್ಕೂಲ್, ಕರ್ನಾಟಕ ಜಾನಪದ ಪರಿಷತ್, ಅಕಾಡೆಮಿ ಬಿದನೂರು ಕಲ್ಚರ್, ಮಲೆನಾಡು ವಾಯ್ಸ್, ಆಟೋ ಮಾಲೀಕರ ಸಂಘ ಹೊಸನಗರ ಇವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದರು.

ಶುಕ್ರವಾರ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು ಕು|| ನಿತ್ಯಶ್ರೀ ಹೆಚ್.ಎಂ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಈ ಕಾರ್ಯಕ್ರಮದ ಸರ್ವಾಧ್ಯಕ್ಷೆ ಕು|| ಅನಿತಾ ವಹಿಸಲಿದ್ದು ಪ್ರಾಸ್ತಾವಿಕವಾಗಿ ನಗರ ರಾಘವೇಂದ್ರ ಮಾತನಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರವಿಣ್ ಕುಮಾರ್, ತಹಶೀಲ್ದಾರ್ ರಶ್ಮಿ ಹಾಲೇಶ್, ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್ ಶಿಕ್ಷಣಾಧಿಕಾರಿ ಹೆಚ್.ಆರ್ ಕೃಷ್ಣಮೂರ್ತಿ, ಸುದೇಶ್ ಕಾಮತ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಣೇಶ್‌ಮುರ್ತಿ, ಪಾಂಡುರಂಗ ಶೆಟ್, ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್, ನಾಗರಾಜ್, ಸೀಮಾ ಶೆರಾವ್ ಇನ್ನೂ ಮುಂತಾದವರು ಆಗಮಿಸಲಿದ್ದಾರೆ.

ಕವನ ವಾಚನಗೋಷ್ಠಿ, ಕಥೆ ವಾಚನಗೋಷ್ಠಿ ಕಾರ್ಯಕ್ರಮಗಳು ನಡೆಯಲಿದ್ದು ಹೊಸನಗರ ತಾಲ್ಲೂಕಿನ ಜ್ವಲಂತ ಸಮಸ್ಯೆಗಳು ಐತಿಹಾಸಿಕ ಬಿದನೂರು ಇವುಗಳ ಅಧ್ಯಕ್ಷತೆಯನ್ನು ಪೂರ್ವಿ ಎಸ್ ಐತಾಳ್, ಕು|| ಶ್ರೀಕಾಂತ್ ಹಾಗೂ ಸಾತ್ವಿಕ್ ಭೋಸ್‌ ವಹಿಸಲಿದ್ದಾರೆ.

ಸಂಜೆ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಣೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ರಾಘವೇಂದ್ರರವರು ವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ಕನ್ನಡಾಭಿಮಾನಿಗಳು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕೆಂದು ಈ ಮೂಲಕ ಕೇಳಿಕೊಂಡರು.

Leave a Comment