ಹೃದಯಾಘಾತ ; ರಸ್ತೆಯಲ್ಲೇ ಕುಸಿದು ಬಿದ್ದು 15 ವರ್ಷದ ಬಾಲಕ ಸಾ*ವು !

Written by Mahesha Hindlemane

Published on:

ಮೂಡಿಗೆರೆ ; ಹೃದಯಾಘಾತಕ್ಕೆ 15 ವರ್ಷದ ಬಾಲಕ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ ಗ್ರಾಮದಲ್ಲಿಂದು ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪ್ರೀತಮ್ (15) ಮೃತ ಬಾಲಕ ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಬಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ನಂತರ ಪ್ರೀತಮ್ ನನ್ನು ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವೈದ್ಯರ ಪ್ರಕಾರ, ಸಾವಿಗೆ ಹೃದಯಾಘಾತವೇ ಕಾರಣವಾಗಿದೆ ಎನ್ನಲಾಗಿದೆ.

ಈ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a Comment