ಹೊಸನಗರ ; ತಾಲ್ಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿ ಅರಣ್ಯ ಪ್ರದೇಶದಲ್ಲಿ ಸುಮಾರು ಅಂದಾಜು ಸುಮಾರು 158 ಮೆಟ್ರಿಕ್ ಟನ್‌ಗಳಷ್ಟು ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮರಳನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಹಾಗೂ ಸಿಬ್ಬಂದಿಗಳು ಮತ್ತು ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳು ಹಾಗೂ ಹೊಸನಗರದ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್‌ಪೆಕ್ಟರ್ ಶಂಕರಗೌಡ ಪಾಟೀಲ್ ಹಾಗೂ ಸಿಬ್ಬಂದಿಗಳು ಜಂಟಿ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ ಮರಳನ್ನು ಜಪ್ತಿ ಮಾಡಿ ಅರಣ್ಯ ಇಲಾಖೆಯ ಸ್ವಾಧೀನಕ್ಕೆ ನೀಡಲಾಗಿದೆ.
ಈ ದಾಳಿಯ ಸಮಯದಲ್ಲಿ ಪೊಲೀಸ್ ಇಲಾಖೆಯ ಜಗದೀಶ್, ಗೋಪಾಲಕೃಷ್ಣ, ಅರಣ್ಯ ಇಲಾಖೆಯ ಸಂತೋಷ್ ಮಲ್ಲನಗೌಡ, ಬಸವರಾಜ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.