ರಿಪ್ಪನ್‌ಪೇಟೆ ; ಹೊಸನಗರ ತಾಲೂಕು ಕುಂಬಾರರ ಸಂಘದ 19ನೇ ವಾರ್ಷಿಕ ಮಹಾಸಭೆಯನ್ನು ಇಂದು (ಮಾ.01) ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಮೈಥೆಯ ಕೊಲ್ಲಪ್ಪ ಬಡೇಶೆಟ್ರುಮನೆ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಶೇಖರಪ್ಪ ಎಲ್ ಹಿಂಡ್ಲೆಮನೆ ತಿಳಿಸಿದ್ದಾರೆ.
ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘನ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ನೆರವೇರಿಸಲಿದ್ದಾರೆ. ಶಾಸಕ ಆರಗ ಜ್ಞಾನೇಂದ್ರ ಹಿರಿಯರಿಗೆ ಸನ್ಮಾನ ಮಾಡುವರು. ತಾಲೂಕು ಕುಂಬಾರರ ಸಂಘದ ಅಧ್ಯಕ್ಷ ಶೇಖರಪ್ಪ ಎಲ್ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್, ಹರತಾಳು ಹಾಲಪ್ಪ, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಭಾಗವಹಿಸಿದ್ದಾರೆ.
ವಿಶೇಷವಾಗಿ ಕಾರ್ಯಕ್ರಮದಲ್ಲಿ ಹಿರಿಯರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಏರ್ಪಡಿಸಲಾಗಿದೆ. ಇನ್ನೂ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಸಹ ಇರುತ್ತದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





