ರಿಪ್ಪನ್ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸಂಪಳ್ಳಿ ಎಂಬಲ್ಲಿ ವಿದ್ಯುತ್ ಕಂಬದ ಬಳಿ ಮೇಯುತ್ತಿದ್ದ ಎರಡು ಜಾನುವಾರುಗಳಿಗೆ ವಿದ್ಯುತ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.
ಜಾನುವಾರು ಓಡಿಸಲು ಹೋದ ಯುವತಿ ಪ್ರಿಯಾಂಕ ಎಂಬುವರಿಗೂ ಹಾಗೂ ಇನ್ನೊಂದು ಜಾನುವಾರಿಗೂ ವಿದ್ಯುತ್ ಶಾಕ್ ತಗುಲಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆನ್ನಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಧಾವಿಸಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.