ಹೊಸನಗರ ; ಹಾಲು ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ 20 ಸಾವಿರ ಲೀ. ಹಾಲು ಮಣ್ಣು ಪಾಲಾದ ಘಟನೆ ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಮಾರುತಿಪುರ ಸಮೀಪದ ಮಾವಿನಹೊಳೆಯಲ್ಲಿ ನಿನ್ನೆ ನಡೆದಿದೆ.

ಶಿವಮೊಗ್ಗ ಕಡೆಯಿಂದ ಕಾಸರಗೋಡಿಗೆ ತೆರಳುತ್ತಿದ್ದ ಲಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. 20 ಸಾವಿರ ಲೀಟರ್ ಸಾಮರ್ಥ್ಯ ಹೊಂದಿದ್ದ ಟ್ಯಾಂಕರ್ ಲಾರಿ ಪಲ್ಟಿಯಾದ ರಭಸಕ್ಕೆ ಹಾಲು ಹೊಳೆಯಂತೆ ಹರಿಯಿತು. ಘಟನೆಯಲ್ಲಿ ಚಾಲಕ ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





