ಹೊಸನಗರ

ಅಂಬ್ರಯ್ಯಮಠ, ಹೆಚ್.ಎಸ್. ನಾಗರಾಜ್, ಸಹಕಾರಿ ರತ್ನ ಎಂ.ಎಂ.ಪರಮೇಶ್‌ರಿಗೆ ಸನ್ಮಾನ

ಹೊಸನಗರ ; ಸಾಹಿತ್ಯ ಕ್ಷೇತ್ರದ ದಿಗ್ಗಜ ತಮ್ಮ ಸಾಹಿತ್ಯದ ಮೂಲಕ ಪ್ರಪಂಚಕ್ಕೆ ವಿಸ್ತರಿಸಿ ಹೊಸನಗರ ತಾಲ್ಲೂಕಿಗೆ ಕೀರ್ತಿ ತಂದಿರುವ ನಗರ ನಿವಾಸಿ ಅಂಬ್ರಯ್ಯಮಠ, ಸತತ 35 ವರ್ಷ ಕಾಲ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುವುದರ ಜೊತೆಗೆ ಹೊಸನಗರ ಪಟ್ಟಣದಲ್ಲಿ ಎಲ್ಲರ ಕಷ್ಟಸುಖಗಳಿಗೆ ಭಾಗಿಯಾಗಿ ಸದಾ ಜನರ ಸೇವೆ ಮಾಡುತ್ತಿರುವ ನೂತನವಾಗಿ ಹೊಸನಗರ ತಾಲ್ಲೂಕು ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹೆಚ್.ಎಸ್. ನಾಗರಾಜ್ ಹಾಗೂ ರಿಪ್ಪನ್‌ಪೇಟೆಯ ಭಾಗದಲ್ಲಿ ಬಡವರ ಕಷ್ಟ-ಸುಖಗಳಿಗೆ ಭಾಗಿಯಾಗುವುದರ ಜೊತೆಗೆ ಸಹಕಾರಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸುವುದರ ಜೊತೆಗೆ ಸತತ 35 ವರ್ಷಗಳ ಕಾಲ ಸಹಕಾರಿ ಸಂಘದ ನಿರ್ದೇಶಕರಾಗಿ ಸತತ 25 ವರ್ಷಗಳ ಕಾಲ ಸೊಸೈಟಿಯ ಅಧ್ಯಕ್ಷರಾಗಿ ಇತ್ತೀಚೆಗೆ ರಾಜ್ಯ ಸರ್ಕಾರ ನೀಡುವ ಸಹಕಾರಿ ರತ್ನ ಪ್ರಶಸ್ತಿ ಪಡೆದಿರುವ ಎಂ.ಎಂ. ಪರಮೇಶ್‌ರನ್ನು ಶಿವಮೊಗ್ಗದ ಸಾಹಿತ್ಯ ಭವನದಲ್ಲಿ ಶನಿವಾರ ಸಂಜೆ ನಡೆದ ಜಿಲ್ಲಾ ಮಟ್ಟದ 20ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅದ್ದೂರಿಯಾಗಿ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

WhatsApp Group Join Now
Telegram Group Join Now
Instagram Group Join Now

ಅಭಿನಂದನೆ :

ಹೊಸನಗರ ತಾಲ್ಲೂಕಿನಲ್ಲಿ ಅವರವರ ಕ್ಷೇತ್ರದಲ್ಲಿ ಮೂರು ಜನರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಸಂಘ ಹಾಗೂ ಹೊಸನಗರ ಕನ್ನಡ ಸಾಹಿತ್ಯ ಪರಿಷತ್ ಈ ಮೂವರ ಆಯ್ಕೆ ಸಂತೋಷ ತಂದಿದೆ ಎಂದು ಕೊಡಚಾದ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾರ್ಷಲ್ ಶರಾಂ, ಕೋಟೆಗಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷರ ಶಶಿಧರ್‌ನಾಯ್ಕ್, ರಿಪ್ಪನ್‌ಪೇಟೆ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಂ.ಬಿ. ಲಕ್ಷ್ಮಣಗೌಡ, ಹೊಸನಗರದ ವರ್ತಕರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಶ್ರೀನಿವಾಸ್ ಕಾಮತ್ ಹಾಗೂ ಪತ್ರಬರಹಗಾರರ ಸಂಘದ ಅಧ್ಯಕ್ಷರಾದ ಎನ್ ಶ್ರೀಧರ ಉಡುಪ, ಎನ್ ದತ್ತಾತ್ರೇಯ ಉಡುಪ, ವರ್ತಕರ ಸಂಘದ ಅಧ್ಯಕ್ಷ ಪೂರ್ಣೇಶ್, ನಿಕಟ ಪೂರ್ವ ಅಧ್ಯಕ್ಷ ವಿಜೇಂದ್ರ ಶೇಟ್, ಬಿ.ಎಸ್. ಸುರೇಶ್, ಹೇಳಿದ್ದು ಇಂತಹ ನಿಷ್ಠಾವಂತರ ಆಯ್ಕೆ ಮಾಡುವುದರಿಂದ ಕನ್ನಡ ಸಾಹಿತ್ಯ ಪರಿಷತ್ ಉತ್ತಂಗಕ್ಕೆ ಎರಲಿದೆ.

ಕೃತಜ್ಞತೆಗಳು :

ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ನಾಡು-ನುಡಿ ಸೇವೆಗಾಗಿ ಹೊಸನಗರ ತಾಲ್ಲೂಕಿನ ಸಾಹಿತಿ ಅಂಬ್ರಯ್ಯಮಠ, ಪತ್ರಕರ್ತ ಹೆಚ್.ಎಸ್. ನಾಗರಾಜ್ ಸಹಕಾರಿ ರತ್ನ ಎಂ.ಎಂ. ಪರಮೇಶ್‌ರವರಿಗೆ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಹಾಗೂ ಸಂಘದ ಎಲ್ಲ ಸಮಿತಿಯವರಿಗೆ ಹಾಗೂ ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗರಕೊಡಿಗೆ ಗಣೇಶ್‌ಮೂರ್ತಿ ಪ್ರಧಾನ ಕಾರ್ಯದರ್ಶಿ ಕೆ.ಜಿ. ನಾಗೇಶ್ ಹಾಗೂ ಎಲ್ಲ ನಿರ್ದೇಶಕ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!