ಹೊಸನಗರ ; ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಹಿರೀಮನೆ ಎಂಬಲ್ಲಿ 34 ವರ್ಷದ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ.
ಹಿರೀಮನೆ ನಿವಾಸಿ ಗಿರೀಶ್ ಮೃತ ವ್ಯಕ್ತಿ. ಬುಧವಾರ ರಾತ್ರಿ ಈತನಿಗೆ ಎದೆನೋವು ಕಾಣಿಸಿಕೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಗಿರೀಶ್ 2 ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದು ತಿಂಗಳ ಹಿಂದೆಯಷ್ಟೇ ಗಂಡು ಮಗುವಿಗೆ ತಂದೆಯಾಗಿದ್ದರು ಎನ್ನಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

