ರಿಪ್ಪನ್‌ಪೇಟೆ ; ಸಮೀಪದ ಬೈರಾಪುರ ಸಿದ್ದಪ್ಪನ ಗುಡಿಯ ಬಳಿಯಲ್ಲಿನ ಕಿರುಮಂತ್ರಾಲಯ ಎಂದೇ ಖ್ಯಾತಿ ಹೊಂದಿರುವ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ ಹಾಗೂ ಹರತಾಳು ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಗರ್ತಿಕೆರೆಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಇಂದು ಬೆಳಗ್ಗೆ ಗುರುರಾಯರ 354ನೇ ಆರಾಧನಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ನೆರವೇರಿತು.
ಗುರುರಾಯರ ಸನ್ನಿಧಿಯಲ್ಲಿ ಅಷ್ಟೋತ್ತರ ನಾಮ ಪಠಣ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಂತರ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

