ಪೋಷಕರು ಬೈದಿದಕ್ಕೆ ನೇಣಿಗೆ ಶರಣಾದ 3ನೇ ತರಗತಿ ವಿದ್ಯಾರ್ಥಿ !

Written by malnadtimes.com

Published on:

THIRTHAHALLI ; ಪೋಷಕರು ಬೈದಿದಕ್ಕೆ ಮನನೊಂದು 3ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಪ್ರೀತಂ (10) ಮೃತ ಬಾಲಕ. ಈತ ಬೆಜ್ಜವಳ್ಳಿಯ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ. ಭಾನುವಾರ ಸಂಜೆ ಮನೆಯಲ್ಲಿ ಯಾವುದೋ ಕಾರಣಕ್ಕೆ ಪೋಷಕರು ಬೈದಿದ್ದರು ಅದರಿಂದಾಗಿ ಮನನೊಂದು ಪ್ರೀತಂ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಈ ವಿಚಾರದ ಬಗ್ಗೆ ಪೊಲೀಸರು ಕೇಸ್‌ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದು, ಘಟನೆಗೆ ನಿಖರವಾದ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

Leave a Comment