ಶಿವಮೊಗ್ಗ

ಶಿವಮೊಗ್ಗ : ವಾಹನ ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ದಂಡ ಪಾವತಿಗೆ ಶೇ.50 ಡಿಸ್ಕೌಂಟ್ !

ಶಿವಮೊಗ್ಗ : ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ವಿಶೇಷ ರಿಯಾಯಿತಿಯನ್ನು ಘೋಷಿಸಲಾಗಿದೆ‌‌.

WhatsApp Group Join Now
Telegram Group Join Now
Instagram Group Join Now

ಹೌದು, ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಬಿ. ಶಿರೋಳ್ಕರ್ ಮಾಹಿತಿ ನೀಡಿದಂತೆ, 1991ರಿಂದ 2022ರೊಳಗಿನ ಪ್ರಕರಣಗಳಿಗೆ ಶೇ. 50ರಷ್ಟು ದಂಡ ರಿಯಾಯಿತಿ ದೊರೆಯಲಿದೆ. ಈ ರಿಯಾಯಿತಿ ನಿರ್ದಿಷ್ಟ ಅವಧಿಗೆ ಮಾತ್ರ ಅನ್ವಯಿಸುವುದಾಗಿ ತಿಳಿಸಲಾಗಿದೆ.

ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳಿಂದ ದಾಖಲಿಸಲಾದ ಈ ಅವಧಿಯೊಳಗಿನ ಪ್ರಕರಣಗಳನ್ನು ಈ ಅವಕಾಶದಿಂದ ಮುಕ್ತಾಯಗೊಳಿಸಬಹುದಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಶಿವಮೊಗ್ಗ ಜಿಲ್ಲೆಯಲ್ಲಿ ಈ ಅವಧಿಗೆ ಸಂಬಂಧಿಸಿದ 790 ಪ್ರಕರಣಗಳು ಇನ್ನು ಬಾಕಿಯಾಗಿದೆ. ವಾಹನ ಮಾಲೀಕರು 21 ಜೂನ್ 2026ರಿಂದ 10 ಜುಲೈ 2026ರೊಳಗೆ ಈ ರಿಯಾಯಿತಿಯನ್ನು ಉಪಯೋಗಿಸಿ ತಮ್ಮ ದಂಡಗಳನ್ನು ಪಾವತಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ವಾಹನ ಮಾಲೀಕರು ಈ ಅವಕಾಶವನ್ನು ನಿಗದಿತ ಸಮಯದಲ್ಲಿ ಉಪಯೋಗಿಸಿಕೊಂಡು ಸಹಕಾರ ನೀಡುವಂತೆ ವಿನಂತಿ ಮಾಡಲಾಗಿದೆ. ಈ ಮೂಲಕ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಸರಳವಾಗಿ ಮುಕ್ತಾಯಗೊಳಿಸಲು ಸಾರ್ವಜನಿಕರಿಗೆ ಸುವರ್ಣಾವಕಾಶ ಸಿಗಲಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]