HOSANAGARA | ಸುಮಾರು 8 ವರ್ಷಗಳ ಹಿಂದೆ ಹೊಸನಗರ ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಿಸಿ ಉದ್ಘಾಟಿಸಲಾಗಿದ್ದು ಆದರೆ ಆಸ್ಪತ್ರೆಯ ಮೇಲ್ಛಾವಣಿ, ಆಪರೇಷನ್ ಥಿಯೇಟರ್‌ನ ಕೆಲವು ಭಾಗಗಳಲ್ಲಿ ಈ ವರ್ಷದ ಮಳೆಗಾಲದಲ್ಲಿ ಸೋರುತ್ತಿರುವ ವಿಷಯ ಶಾಸಕ ಬೇಳೂರು ಗೋಪಾಲಕೃಷ್ಣರವರ ಗಮನಕ್ಕೆ ಬಂದಿದ್ದು ಆದರೆ ಮೇಲ್ಚಾವಣಿ ದುರಸ್ಥಿಗಾಗಿ ಶಾಸಕರು 50 ಲಕ್ಷ ರೂ. ಮಂಜೂರಾತಿಗಾಗಿ ಒಂದು ತಿಂಗಳ ಹಿಂದೆಯೇ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಕಾಂಗ್ರೆಸ್‌ನ ಟೌನ್ ಘಟಕದ ಅಧ್ಯಕ್ಷ ಕೆ.ಎಸ್. ಗುರುರಾಜ್ ಹೇಳಿದರು.
ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಶಾಸಕರ ವಿಶೇಷ ಅಧಿಕಾರಿ ಟಿ.ಪಿ ರಮೇಶ್ ಶಿವಮೊಗ್ಗ ಇಂಜಿನಿಯರ್ ಹರೀಶ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ಬೇಳೂರು ಗೋಪಾಲಕೃಷ್ಣರವರು ಶಾಸಕರಾಗಿ ಅಧಿಕಾರಕ್ಕೆ ಬಂದು ಕೇವಲ 1 ವರ್ಷ ಎರಡು ತಿಂಗಳು ಕಳೆದಿದೆ. ಈ ವರ್ಷ ಮಳೆಗಾಲ ನೋಡುವಂತಾಗಿದೆ. ಈಗಾಗಲೇ ಹೊಸನಗರ ಕ್ಷೇತ್ರದ ಸಾಕಷ್ಟು ಅಭಿವೃದ್ಧಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು ಮಳೆಗಾಲ ಮುಗಿದ ಮೇಲೆ ಅಭಿವೃದ್ಧಿ ಕೆಲಸಗಳು ಆಗಲಿದೆ. ಮಳೆಗಾಲ ಮುಗಿಯುವುದನ್ನೇ ಕಾಯುತ್ತಿರುವ ನಮ್ಮ ಶಾಸಕರು, ಮಳೆಗಾಲದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇನ್ನೂ 15 ದಿನಗಳಲ್ಲಿ ಆಸ್ಪತ್ರೆಯ ಮೇಲ್ಚಾವಣಿ ಕೆಲಸ ಆರಂಭಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಆರೋಗ್ಯ ಇಲಾಖೆಯ ಇಂಜಿನಿಯರ್ ಹರೀಶ್, ಶಾಸಕರ ವಿಶೇಷ ಅಧಿಕಾರಿ ಟಿ.ಪಿ ರಮೇಶ್, ನಾಸೀರ್, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಆಸ್ಪತ್ರೆಯ ಆರೋಗ್ಯಾಧಿಕಾರಿ ಗುರುಮೂರ್ತಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
Read More
Rain Report | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ & ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?
ಅವೈಜ್ಞಾನಿಕ ಪದ್ದತಿಯೋ ಅಥವಾ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರವೋ…!? ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇನಿದು ?