ಸಾಗರ

ಹಾವು ಕಚ್ಚಿ 06 ತಿಂಗಳ ಗರ್ಭಿಣಿ ಸಾವು !

ಸಾಗರ : ಹಾವು ಕಡಿದು ಆರು ತಿಂಗಳ ಗರ್ಭಿಣಿ ಮೃತಪಟ್ಟ ಹೃದಯವಿದ್ರಾವಕ ಘಟನೆ ತಾಲೂಕಿನ ಆನಂದಪುರ ಸಮೀಪದ ಸುಳಗೋಡು ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಸುಳಗೋಡು ಗ್ರಾಮದ ವೀರಭದ್ರ ಎಂಬುವವರ ಪತ್ನಿ ಸ್ವಾತಿ (26) ಮೃತ ದುರ್ದೈವಿ. ಸ್ವಾತಿ ಆರು ತಿಂಗಳ ಗರ್ಭಿಣಿಯಾಗಿದ್ದರು. ಶನಿವಾರ ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ಸುಳಗೋಡು ಗ್ರಾಮದಲ್ಲಿ ಶುಂಠಿ ಕೆಲಸಕ್ಕೆ ತನ್ನ ಪತಿ ಮತ್ತು ಇತರ ಕೂಲಿ ಕಾರ್ಮಿಕರೊಂದಿಗೆ ಹೋಗಿದ್ದರು. ಕೆಲಸದ ನಡುವೆ ಎಲ್ಲರೂ ಊಟ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಸ್ವಾತಿ ಅವರ ಬಲಗಾಲಿನ ಮೊಣಕಾಲಿಗೆ ವಿಷಪೂರಿತ ಹಾವು ಕಚ್ಚಿದೆ.

ಮೃತ ಮಹಿಳೆ ಸ್ವಾತಿ

ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆನಂದಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!