ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗತರಾದ 6 ಮಂದಿ ನಕ್ಸಲರು !

Written by malnadtimes.com

Published on:

BANGALORE ; ಕಳೆದ ಎರಡು ದಶಗಳಿಗೂ ಹೆಚ್ಚಿನ ಕಾಲ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ಅರಣ್ಯಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಹೋರಾಟ ನಡೆಸುತ್ತಿದ್ದ ಆರು ಮಂದಿ ನಕ್ಸಲೀಯರು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರ ಸಮ್ಮುಖದಲ್ಲಿ ಬುಧವಾರ ಸಂಜೆ ಶರಣಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

6 ಮಂದಿ ನಕ್ಸಲರ ಶರಣಾಗತಿಯೊಂದಿಗೆ ಕರ್ನಾಟಕದಲ್ಲಿ ನಕ್ಸಲ್ ಹೋರಾಟ ಅಂತ್ಯ ಕಾಣುವ ಕಾಲ ಸನ್ನಿಹಿತವಾದಂತಾಗಿದೆ. ಇತ್ತೀಚಿಗೆ ನಕ್ಸಲ್ ನಾಯಕ ವಿಕ್ರಂ ಗೌಡ ನನ್ನ ಎನ್‌ಕೌಂಟರ್‌ ನಡೆಸಿ ಹತ್ಯೆಗೈದ ಬೆನ್ನಲ್ಲೇ ಕರ್ನಾಟದಲ್ಲಿರುವ ಆರು ನಕ್ಸಲರು ಶರಣಾಗುವ ಕುರಿತು ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಶಸ್ತ್ರಾಸ್ತ್ರ ತ್ಯಜಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಎದುರು ಆರು ನಕ್ಸಲರಾದ ಶೃಂಗೇರಿ ತಾಲೂಕಿನ ಮುಂಡುಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲಕದ ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಳಿ, ವಸಂತ, ಎನ್.ಜೀಶಾ ಶರಣಾಗಲು ನಿರ್ಧರಿಸಿದ್ದರು. ಆದರೆ ಕೊನೆ ಗಳಿಗೆಯಲ್ಲಿ ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮುಂದೆ ಶರಣಾಗಲು ನಿರ್ಧರಿದ್ದರು ಅದರಂತೆ ಬುಧವಾರ ಸಂಜೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಕ್ಕೆ ಬಂದ ಆರು ಮಂದಿ ನಕ್ಸಲರು ಶರಣಾಗಿದ್ದಾರೆ.

ಶರಣಾದ ಆರು ಮಂದಿಗೆ ಮುಖ್ಯಮಂತ್ರಿ ಹೂ ನೀಡಿ ಬಳಿಕ ಎಲ್ಲರಿಗೂ ಸಂವಿಧಾನ ಪುಸ್ತಕ ನೀಡಿದರು. ಬಳಿಕ ನಕ್ಸಲರ ಜೊತೆ ಸಭೆ ನಡೆಸಿದ ಅವರು ಸಮಸ್ಯೆಗಳನ್ನು ಆಲಿಸಿ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿದರು.

ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು. ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್‌ ವಸತಿಗೆ ಸರ್ಕಾರ ನೆರವು ಒದಗಿಸಿದೆ. ಶಾಂತಿಗಾಗಿ ನಾಗರಿಕ ವೇದಿಕೆಯವರು ನನ್ನನ್ನು ಭೇಟಿ ಮಾಡಿ ನಕ್ಸಲಿಯರ ಮನವೊಲಿಸುವ ಬಗ್ಗೆ ತಿಳಿಸಿದ್ದರು. ಆ ಸಂದರ್ಭದಲ್ಲಿ ನಕ್ಸಲಿಸಂ ತ್ಯಜಿಸಿ ಮುಖ್ಯವಾಹಿನಿಗೆ ಬರಲು ಸರ್ಕಾರ ಎಲ್ಲಾ ನೆರವು ನೀಡಲಿದೆ ಎಂದು ಹೇಳಿದ್ದೆ. ನಾವು ಕರ್ನಾಟಕದಲ್ಲಿ ನಕ್ಸಲಿಸಂ ಕೊನೆಗಾಣಿಸಲು, ಅವರ ಬೇಡಿಕೆಗೆ ಸ್ಪಂದಿಸಲು ಏನೆಲ್ಲಾ ಕಾರ್ಯಕ್ರಮ ಬೇಕೋ ಅದನ್ನು ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ

Leave a Comment