Shivamogga

13 ವಿವಿಧ ರಸ್ತೆಗಳ ಅಭಿವೃದ್ಧಿಗೆ ₹ 68 ಕೋಟಿ ಅನುದಾನ ಮಂಜೂರು ; ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ : ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ರಸ್ತೆ ಮತ್ತು ಮೂಲ ಸೌಕರ್ಯ ನಿಧಿ ಅಡಿಯಲ್ಲಿ (CRIF) ಒಟ್ಟು 68 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಯೋಜನೆಗೆ ಮಂಜೂರಾತಿ ನೀಡಲಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಯೋಜನೆಯಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 13 ಪ್ರಮುಖ ಕಾಮಗಾರಿ ಮೂಲಕ ವಿವಿಧೆಡೆ ಒಟ್ಟು 84.78 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿಪಡಿಸಲಾಗುವುದು. ಜಿಲ್ಲೆಯ ಪ್ರಮುಖ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ರಸ್ತೆಯನ್ನು ಈ ಅನುದಾನದ ಮೂಲಕ ಮೇಲ್ದರ್ಜೆಗೇರಿಸಲಾಗುವುದು. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ, ಭದ್ರಾವತಿ, ಶಿಕಾರಿಪುರ, ಸೊರಬ, ಸಾಗರ, ತೀರ್ಥಹಳ್ಳಿ ಮತ್ತು ಬೈಂದೂರು ತಾಲ್ಲೂಕುಗಳಲ್ಲಿಯೂ ನಿಗದಿತ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಮರು ಡಾಂಬರೀಕರಣ ಮಾಡಲಾಗುವುದೆಂದು ಸಂಸದರು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಗಳ ಬಲವರ್ಧನೆ, ಸುಗಮ ಸಂಚಾರ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅನುದಾನವನ್ನು ಮಂಜೂರು ಮಾಡಿದೆ. ಈ ಪ್ರಮುಖ ರಸ್ತೆಗಳ ಸುಧಾರಣೆಗೆ ಕಾಮಗಾರಿ ಪೂರ್ಣಗೊಂಡ ಬಳಿಗೆ ಜಿಲ್ಲೆಯ ಆರ್ಥಿಕ, ಶೈಕ್ಷಣಿಕ ಮತ್ತರು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ವಿವರಿಸಿದ್ದಾರೆ.

ಕೇಂದ್ರ ರಸ್ತೆ ಮತ್ತು ಮೂಲ ಸೌಕರ್ಯ ನಿಧಿ ಅಡಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ರಾಜ್ಯ ಮತ್ತು ಜಿಲ್ಲಾ ಸಂಪರ್ಕ ರಸ್ತೆಗಳ ಅಭಿವೃದ್ಧಿ, ಬಲವರ್ಧನೆ ಮತ್ತು ಡಾಂಬರೀಕರಣಕ್ಕೆ ಅನುದಾನ ಒದಗಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವ ನಿತಿನ್ ಗಡ್ಕರಿಯವರಿಗೆ ಸಂಸದ ಬಿ.ವೈ ರಾಘವೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>