RIPPONPETE ; ಇಲ್ಲಿನ ಕಸ್ತೂರಿ ಕನ್ನಡ ಸಂಘ ಮತ್ತು ಡಾ.ಪುನೀತ್‌ರಾಜ್ ಅಭಿಮಾನಿ ಬಳಗ ಇವರ ಸಹಯೋಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಮಾದರಿ ಪಾಠ ಶಾಲಾ ಆವರಣದಲ್ಲಿ ಕನ್ನಡ ಧ್ವಜವನ್ನು ಧ್ವಜಾರೋಹನ ಮಾಡುವ ಮೂಲಕ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷೆ ಧನಲಕ್ಷ್ಮಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಮಾತೃಭಾಷೆಯ ಕನ್ನಡವನ್ನು ಗೌರವಿಸುವ ಮೂಲಕ ಅದನ್ನು ಪ್ರೀತಿಸಿ ಪ್ರೋತ್ಸಾಹಿಸುವಂತಾಗ ಬೇಕು ನಾಡು ನುಡಿ ಕಲೆ ಸಾಹಿತ್ಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಇಂದಿನ ಯುವಜನಾಂಗ ಮುಂದಾಗಬೇಕು ಎಂದು ಕರೆ ನೀಡುವ ಮೂಲಕ ಭಾಷೆಯ ಬಗ್ಗೆ ಆವಹೇಳನ ನಡೆಸುವವರ ವಿರುದ್ಧ ನಾವು ಸಂಘಟನಾತ್ಮಕ ಹೋರಾಟಕ್ಕೆ ಸದಾ ಸಿದ್ದರಾಗಬೇಕು ಎಂದರು.

ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಕಸ್ತೂರಿ ಸಂಘದ ಪ್ರಧಾನ ಕಾರ್ಯದರ್ಶಿ ನಿರ್ಮಲ, ಆರ್.ಎ.ಚಾಬುಸಾಬ್, ಜಿ.ಎಸ್.ವರದರಾಜ್, ನಗರಸಭೆಯ ನಿವೃತ್ತ ನೌಕರ ಹಭಿಬುಲ್ಲಾ ಷರೀಫ್ ಇನ್ನಿತರ ಹಲವರು ಹಾಜರಿದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.