Ajjampura

ವೈದ್ಯ ನೀಡಿದ ಇಂಜೆಕ್ಷನ್‌ಗೆ 7 ವರ್ಷದ ಬಾಲಕ ಬ*ಲಿ ! ದಾಖಲಾಯ್ತು ದೂರು

AJJAMPURA ; ತೀವ್ರ ಜ್ವರದಿಂದ ಬಳಲುತ್ತಿದ್ದ 7 ವರ್ಷದ ಬಾಲಕನೋರ್ವನಿಗೆ ಖಾಸಗಿ ಕ್ಲಿನಿಕ್‍ನ ವೈದ್ಯನೊಬ್ಬ ಚುಚ್ಚುಮದ್ದು ನೀಡಿದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಎಂಬುವರ ಪುತ್ರ ಸೋನೇಶ್ (07) ಮೃತ ಬಾಲಕ. ಕಳೆದ 4 ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮಗನನ್ನು ಪೋಷಕರು ಶನಿವಾರ ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್‍ಗೆ ಚಿಕಿತ್ಸೆಗೆ ಕರೆದೊಯ್ದಿದ್ದಾರೆ. ಬಾಲಕನನ್ನು ಪರೀಕ್ಷಿಸಿದ ವೈದ್ಯ ಚುಚ್ಚುಮದ್ದು ನೀಡಿ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ಆದರೆ ಬಾಲಕನಿಗೆ ವೈದ್ಯ ಚುಚ್ಚುಮದ್ದು ನೀಡಿದ್ದ ಜಾಗದಲ್ಲಿ ಗುಳ್ಳೆಗಳು ಕಾಣಿಸಿಕೊಂಡಿದ್ದು, ನೋವಿನಿಂದಾಗಿ ಬಾಲಕ ಮತ್ತಷ್ಟು ಅಸ್ವಸ್ಥನಾಗಿದ್ದಾನೆ. ಇದರಿಂದ ಭೀತಿಗೊಳಗಾದ ಪೋಷಕರು ಬಾಲಕನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ.

ವೈದ್ಯ ವರುಣ್

ಘಟನೆ ಸಂಬಂಧ ಪೋಷಕರು ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ವೈದ್ಯನ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ವೈದ್ಯ ತಲೆಮರೆಸಿಕೊಂಡಿದ್ದಾನೆಂದು ತಿಳಿದು ಬಂದಿದೆ.

BAMS ವ್ಯಾಸಂಗ ಮಾಡಿರುವ ವರುಣ್ ಮಕ್ಕಳಿಗೆ ಇಂಜೆಕ್ಷನ್ ಮಾಡುವಂತಿಲ್ಲ ಎಂಬ ನಿಯಮವಿದ್ದರೂ ಇಂಜೆಕ್ಷನ್ ನೀಡಿರುವುದಕ್ಕೆ ಅಜ್ಜಂಪುರ ತಾಲೂಕಿನಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಕ್ರಮಕ್ಕೆ ಆಗ್ರಹಿಸಿದ್ದಾರೆ. ವೈದ್ಯನ ನಿರ್ಲಕ್ಷ್ಯಕ್ಕೆ ಜ್ವರದಿಂದ ಬಳಲುತ್ತಿದ್ದ 7 ವರ್ಷದ ಬಾಲಕ ಓವರ್ ಡೋಸ್ ಇಂಜೆಕ್ಷನ್’ಗೆ ಬಲಿಯಾಗಿದ್ದು ಮಾತ್ರ ದುರಂತ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!