AJJAMPURA ; ತೀವ್ರ ಜ್ವರದಿಂದ ಬಳಲುತ್ತಿದ್ದ 7 ವರ್ಷದ ಬಾಲಕನೋರ್ವನಿಗೆ ಖಾಸಗಿ ಕ್ಲಿನಿಕ್‍ನ ವೈದ್ಯನೊಬ್ಬ ಚುಚ್ಚುಮದ್ದು ನೀಡಿದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.
ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಎಂಬುವರ ಪುತ್ರ ಸೋನೇಶ್ (07) ಮೃತ ಬಾಲಕ. ಕಳೆದ 4 ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮಗನನ್ನು ಪೋಷಕರು ಶನಿವಾರ ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್‍ಗೆ ಚಿಕಿತ್ಸೆಗೆ ಕರೆದೊಯ್ದಿದ್ದಾರೆ. ಬಾಲಕನನ್ನು ಪರೀಕ್ಷಿಸಿದ ವೈದ್ಯ ಚುಚ್ಚುಮದ್ದು ನೀಡಿ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ಆದರೆ ಬಾಲಕನಿಗೆ ವೈದ್ಯ ಚುಚ್ಚುಮದ್ದು ನೀಡಿದ್ದ ಜಾಗದಲ್ಲಿ ಗುಳ್ಳೆಗಳು ಕಾಣಿಸಿಕೊಂಡಿದ್ದು, ನೋವಿನಿಂದಾಗಿ ಬಾಲಕ ಮತ್ತಷ್ಟು ಅಸ್ವಸ್ಥನಾಗಿದ್ದಾನೆ. ಇದರಿಂದ ಭೀತಿಗೊಳಗಾದ ಪೋಷಕರು ಬಾಲಕನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ.

ಘಟನೆ ಸಂಬಂಧ ಪೋಷಕರು ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ವೈದ್ಯನ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ವೈದ್ಯ ತಲೆಮರೆಸಿಕೊಂಡಿದ್ದಾನೆಂದು ತಿಳಿದು ಬಂದಿದೆ.
BAMS ವ್ಯಾಸಂಗ ಮಾಡಿರುವ ವರುಣ್ ಮಕ್ಕಳಿಗೆ ಇಂಜೆಕ್ಷನ್ ಮಾಡುವಂತಿಲ್ಲ ಎಂಬ ನಿಯಮವಿದ್ದರೂ ಇಂಜೆಕ್ಷನ್ ನೀಡಿರುವುದಕ್ಕೆ ಅಜ್ಜಂಪುರ ತಾಲೂಕಿನಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಕ್ರಮಕ್ಕೆ ಆಗ್ರಹಿಸಿದ್ದಾರೆ. ವೈದ್ಯನ ನಿರ್ಲಕ್ಷ್ಯಕ್ಕೆ ಜ್ವರದಿಂದ ಬಳಲುತ್ತಿದ್ದ 7 ವರ್ಷದ ಬಾಲಕ ಓವರ್ ಡೋಸ್ ಇಂಜೆಕ್ಷನ್’ಗೆ ಬಲಿಯಾಗಿದ್ದು ಮಾತ್ರ ದುರಂತ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.