ಹೊಸನಗರ

ಹೊಸನಗರದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ ಹೇಗಿತ್ತು ಗೊತ್ತಾ?

ಹೊಸನಗರ ; ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾರತ ದೇಶಕ್ಕೆ ನಮ್ಮದೇ ಆಡಳಿತದಲ್ಲಿ ನಾವು ಈ ದೇಶದಲ್ಲಿ ಸ್ವತಂತ್ರವಾಗಿ ಬದುಕುತ್ತಿದ್ದೇವೆ ಎನ್ನುವ ಇಡೀ ಭಾರತ ಸಮಾಜವೇ ಎದ್ದು ನಿಂತು ಶಪಥ ಮಾಡುವ ಪವಿತ್ರವಾದ ದಿನ ಗಣರಾಜ್ಯೋತ್ಸವವಾಗಿದೆ ಎಂದು ಹೊಸನಗರ ತಹಸೀಲ್ದಾರ್ ಭರತ್‌ರಾಜ್‌ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಇಲ್ಲಿನ ನೆಹರು ಮೈದಾನದಲ್ಲಿ 77ನೇ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗಿದ್ದು ರಾಷ್ಟ್ರ ಧ್ವಜಾರೋಹಣ ಕಾರ್ಯ ನೆರವೇರಿಸಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಂದೇಶ ನೀಡಿದ ಅವರು, ಭಾರತ ದೇಶಕ್ಕೆ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ಗಮನದಲ್ಲಿಟ್ಟುಕೊಂಡು ಅವರ ಬಾಳನ್ನು ರೂಪಿಸಲೆಂದು ಹಚ್ಚಿಟ್ಟಿರುವ ಬೆಳ್ಳಿ ಹಣತೆಯಾಗಿದೆ. ನಮ್ಮ ಸಂವಿಧಾನ, ವಿಶ್ವ ಭೂಪಟದಲ್ಲಿ ಹಲವು ಭಾಷೆ ಧರ್ಮ, ಪ್ರಾಂತ್ಯಗಳಿಂದ ಕೂಡಿರುವ ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ ನಮ್ಮ ಭಾರತ. ಐಕ್ಯತೆ ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಸದೃಢ ರಾಷ್ಟ್ರವಾಗಿ ನಮ್ಮ ದೇಶ ಬೆಳೆದು ನಿಂತಿದೆ. ಸಮಾಜದ ಶ್ರೇಯೋಭಿವೃದ್ಧಿ ನಮ್ಮ ಸಂವಿಧಾನದ ಅಂತಿಮ ಆಶಯ ಎಂಬ ಬಾಬಾ ಸಾಹೇಬ್ ಅಂಬೇಡ್ಕರ್ ಮಾತನ್ನು ಅರಿತು ಅಭಿವೃದ್ಧಿಯ ಪಥದಲ್ಲಿ ದಾಪುಗಾಲಿಡುತ್ತಿದ್ದೇವೆ. ಅವರ ನುಡಿಗಳ ಆಶಯದಂತೆ ನಡೆದುಕೊಳ್ಳಲು ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತಿದ್ದೇವೆ. ನಾವು ನೀವೆಲ್ಲರೂ ಅಭಿವೃದ್ಧಿಯೊಂದಿಗೆ ಭಾರತವನ್ನು ಸಶಕ್ತ ಸದೃಢ ಪ್ರಜಾಪ್ರಭುತ್ವವಾಗಿ ರೂಪಿಸಲು ಶ್ರಮಿಸೋಣ. ಗುರುದೇವ ರವೀಂದ್ರನಾಥ ಠಾಗೂರರು ಹೇಳಿದಂತೆ, ಮೇಲು ಕೀಳು ಬಡವ ಬಲ್ಲಿದನೆಂಬ ಭೇದ ಮರೆತು ಸಹಬಾಳ್ವೆಯ ರಾಷ್ಟ್ರ ನಿರ್ಮಾಣ ಮಾಡೋಣ. ಸ್ನೇಹ, ಪ್ರೀತಿ ಸೋದರ ಭಾವದ ನೆಲೆ ನಮ್ಮ ಜೀವಾಳವಾಗಲಿ ಸಂವಿಧಾನದ ಪ್ರಸ್ತಾವನೆಯ ಆಶಯಗಳು ಇನ್ನಷ್ಟು ಸಾಕಾರವಾಗಲಿ. 77ನೇ ಗಣರಾಜ್ಯೋತ್ಸವದ ಈ ಸಂಭ್ರಮದಲ್ಲಿ ಹೊಸ ನಾಳೆಯ ನಿರ್ಮಾಣದ ನಮ್ಮ ಹಿರಿಯರು ಕಂಡ ಕನಸನ್ನು ಇನ್ನಷ್ಟು ಸಾಕಾರವಾಗಿಸುವ ಪಣ ತೊಡೋಣ ಎಂದರು.

ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1FTPpNnDJf/

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಮಕ್ಕಳಿಂದ ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ವಿವಿಧ ರೀತಿಯಲ್ಲಿ ತಾಲ್ಲೂಕಿಗೆ ಕೀರ್ತಿ ತಂದವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಹೊಸನಗರ ಪೊಲೀಸ್ ವೃತ್ತ ನಿರೀಕ್ಷಕ ಗೌಡಪ್ಪ ಗೌಡರ್, ಪಿಎಸ್ಐ ಶಂಕರಗೌಡ ಪಾಟೀಲ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಹರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್, ನಾಡ ಹಬ್ಬಗಳ ಸಮಿತಿಯ ಸದಸ್ಯರಾದ ಶ್ರೀನಿವಾಸ್ ಕಾಮತ್, ಶ್ರೀಧರ ಉಡುಪ, ವರ್ತಕರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ವಿಜೇಂದ್ರ ಶೇಟ್, ತಾಲ್ಲೂಕು, ಗ್ರೇಡ್ 2 ತಹಸೀಲ್ದಾರ್ ರಾಕೇಶ್, ದೈಹಿಕ ಪರೀವಿಕ್ಷಕರಾದ ವಿನಯ್ ಹೆಗಡೆ ಕರ್ಕಿ, ಶಿಶು ಅಭಿವೃದ್ಧಿ ಅಧಿಕಾರಿ ಗಾಯಿತ್ರಿ, ರಾಜು, ಚಿರಾಗ್, ಚುನಾವಣೆ ಶಿರಾಸ್ಥೆದಾರ್ ಸತೀಶ್, ಸುಧೀಂದ್ರ ಕುಮಾರ್, ದೈಹಿಕ ಶಿಕ್ಷಕ ಸಂಘದ ರಾಜುಶೆಟ್ಟಿ, ಗ್ರಾಮ ಆಡಳಿತಾಧಿಕಾರಿ ಲೋಹಿತ್, ಸಿದ್ದಪ್ಪ, ರಾಘವೇಂದ್ರ, ರೇಣುಕಯ್ಯ, ಮಹಮದ್ ರೈಸ್, ರಾಧಿಕ ರತ್ನಾಕರ್ ಶೆಟ್ಟಿ, ಧನಂಜಯ, ರೇಣುಕೇಶ್, ಗಣೇಶ್, ಅಶೋಕ, ನಾಗಪ್ಪ, ಸುಹಾಸ್, ತಾಲ್ಲೂಕು ಕಛೇರಿಯ ಎಲ್ಲ ನೌಕರ ವರ್ಗ, ತಾಲ್ಲೂಕು ಪಂಚಾಯಿತಿಯ ಎಲ್ಲ ನೌಕರ ವರ್ಗ ವಿವಿಧ ಇಲಾಖೆಯ ಸರ್ಕಾರಿ ನೌಕರ ವರ್ಗ, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷ ಸದಸ್ಯರುಗಳು ಹಾಗೂ ಸರ್ಕಾರಿ ಹಾಗೂ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ವೃಂದ ಹಾಗೂ ಎಲ್ಲ ಸರ್ಕಾರಿ ಶಾಲೆಯ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಆಗಮಿಸಿ ಕಾರ್ಯಕ್ರಮಕ್ಕೆ ಮೆರಗು ನೀಡಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!