ತೀರ್ಥಹಳ್ಳಿ ; ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ (ICSC) ಶಾಲೆಯ ಐಸಿರಿ (14) ಮೃತಪಟ್ಟ ವಿದ್ಯಾರ್ಥಿನಿ. ಹೆಗ್ಗೋಡಿನ ನಿವಾಸಿಯಾದ ಐಸಿರಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.
ಕಳೆದ ಕೆಲ ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ಈಕೆಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಕಿಡ್ನಿ ವೈಫಲ್ಯ ಸಹ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಐಸಿರಿ ಅಕಾಲಿಕ ನಿಧನಕ್ಕೆ ಸಹ್ಯಾದ್ರಿ ಶಾಲಾ ಶಿಕ್ಷಣ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.