ಮೂಡಿಗೆರೆ ; ಭಾರೀ ಮಳೆಯಿಂದಾಗಿ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ನಡೆದಿದೆ.
ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್ ಹಾಗೂ ಇನ್ನಿತರ ಕಡೆ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಸಂದರ್ಭದಲ್ಲೇ ಈ ಅಪಘಾತ ಸಂಭವಿಸಿದೆ.
ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಎದುರಿನಿಂದ ಬಂದ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ನಂತರ ರಸ್ತೆ ಬದಿಗೆ ಜಾರಿದೆ. ಈ ಅಪಘಾತದಲ್ಲಿ ಕಾರು ಚಾಲಕ ಸೇರಿ ಬಸ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.